ಒಂದೇ ತಿಂಗಳಲ್ಲಿ 6,085 ಕೋಟಿ ಜಿಎಸ್ಟಿ ಸಂಗ್ರಹ : ಸಿಎಂ

ಭಾನುವಾರ, 12 ಫೆಬ್ರವರಿ 2023 (11:28 IST)
ಬೆಂಗಳೂರು : ಜನವರಿ ಒಂದೇ ತಿಂಗಳಲ್ಲಿ 6085 ಕೋಟಿ ರೂ. ಜಿಎಸ್ಟಿ ಸಂಗ್ರಹ ಮಾಡಿ ರಾಜ್ಯ ದಾಖಲೆ ಬರೆದಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ, ಜಿಎಸ್ಟಿ ತೆರಿಗೆ ಸಂಗ್ರಹದಲ್ಲಿ ಕರ್ನಾಟಕ ಶೇ.30 ರಷ್ಟು ಅತ್ಯಧಿಕ ಬೆಳವಣಿಗೆ ಪ್ರಮಾಣ ಹೊಂದಿರುವ ರಾಜ್ಯವಾಗಿದೆ. 

ತೆರಿಗೆ ಸಂಗ್ರಹದಲ್ಲಿ ಸುಧಾರಣೆ, ಹೆಚ್ಚಿನ ಕಣ್ಗಾವಲು, ಆರ್ಥಿಕತೆಯಲ್ಲಿ ಚೇತರಿಕೆ ಹಾಗೂ ತೆರಿಗೆದಾರರಲ್ಲಿ ಹೆಚ್ಚಿರುವ ಅನುಸರಣೆಯಿಂದಾಗಿ ಈ ಗಮನಾರ್ಹ ಸಾಧನೆ ಮಾಡಲು ಸಾಧ್ಯವಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ