6 ವರ್ಷದ ಬಾಲಕಿಯ ಮೇಲೆ ಅಪ್ರಾಪ್ತ ಸಂಬಂಧಿಕನಿಂದ ಅತ್ಯಾಚಾರ; ಬಾಲಕಿಯ ಸ್ಥಿತಿ ಚಿಂತಾಜನಕ

ಶುಕ್ರವಾರ, 14 ಸೆಪ್ಟಂಬರ್ 2018 (11:41 IST)
ಭುವನೇಶ್ವರ್ : 6 ವರ್ಷದ ಬಾಲಕಿಯೊಬ್ಬಳು ಮನೆಯಲ್ಲಿ ಒಬ್ಬಳೇ ಇರುವುದನ್ನು ಕಂಡ ಆಕೆಯ 13 ವರ್ಷದ ಸಂಬಂಧಿಕನೊಬ್ಬ ಆಕೆಯ ಮೇಲೆ ಅತ್ಯಾಚಾರ ಎಸಗಿದ ಘಟನೆ ಬುಧವಾರ ಓಡಿಶಾದ ಭುವನೇಶ್ವರ್ ನಲ್ಲಿ ನಡೆದಿದೆ.


ಬಾಲಕಿ ಆರೋಗ್ಯದ ಸ್ಥಿತಿ ತುಂಬಾ ಹದಗೆಟ್ಟಿದ್ದಾಗ ಪೋಷಕರು ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಆಕೆಯ ಮೇಲೆ ಅತ್ಯಾಚಾರ ನಡೆದಿರುವ ವಿಚಾರ ತಿಳಿದುಬಂದಿದೆ.


ಸದ್ಯ ಬಾಲಕಿ ಈಗ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಈಗಲೂ ಆಕೆಯ ಸ್ಥಿತಿ ಚಿಂತಾಜನಕವಾಗಿದೆ. ಬಾಲಕಿಗೆ ಉಚಿತವಾಗಿ ಚಿಕಿತ್ಸೆ ಮಾಡಲಾಗುತ್ತಿದೆ. ಅಲ್ಲದೇ ಆಕೆಯ ಚಿಕಿತ್ಸೆಗೆ ಯಾವುದೇ ಹಣವನ್ನು ಪಡೆಯುತ್ತಿಲ್ಲ. ಆಕೆಯ ಚಿಕಿತ್ಸೆಗಾಗಿ ಸ್ಪೆಷಲಿಸ್ಟ್ ತಂಡ ನಿರಂತವಾಗಿ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಡಾ. ಮಹಾರಾಣಾ ಹೇಳಿದ್ದಾರೆ.


ಸದ್ಯ ಆರೋಪಿ ಬಾಲಕನ ವಿರುದ್ಧ ಐಪಿಸಿ ಸೆಕ್ಷೆನ್ ಹಾಗೂ ಪೋಸ್ಕೋ ಕಾಯ್ದೆ ಅಡಿ ಪ್ರಕರಣ ದಾಖಲಾಗಿದ್ದು ಈ ಬಗ್ಗೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ