ಶಿಮ್ಲಾ : ಕಳೆದ ಕೆಲ ದಿನಗಳಿಂದ ಹಿಮಾಚಲ ಪ್ರದೇಶದಲ್ಲಿ ಸುರಿಯುತ್ತಿರುವ ರಣಭೀಕರ ಮಳೆಯಿಂದಾಗಿ ಸಾವಿನ ಸಂಖ್ಯೆ 74ಕ್ಕೆ ಏರಿಕೆಯಾಗಿದ್ದು, ಸುಮಾರು 10 ಸಾವಿರ ಕೋಟಿ ನಷ್ಟವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಣ ಮಳೆಯಿಂದ ಅಲ್ಲಲ್ಲಿ ಭೂಕುಸಿತ ಉಂಟಾಗುತ್ತಿದೆ. ಸಮ್ಮರ್ ಹಿಲ್ನಲ್ಲಿರುವ ಶಿವ ದೇವಾಲಯದಲ್ಲಿ ಭೂಕುಸಿತ ಹಾಗೂ ಶಿಮ್ಲಾದಲ್ಲಿ ಸಂಭವಿಸಿದ ಮೂರು ಭೂಕುಸಿತಗಳಲ್ಲಿ 21 ಮಂದಿ ಸಾವನ್ನಪ್ಪಿದ್ದಾರೆ. ಜೂನ್ 24 ರಂದು ಆರಂಭವಾದ ಮುಂಗಾರು ಮಳೆಯಿಂದಾಗಿ ರಾಜ್ಯದಲ್ಲಿ ಒಟ್ಟು 217 ಜನರು ಮಳೆ ಸಂಬಂಧಿತ ಘಟನೆಗಳಲ್ಲಿ ಸಾವನ್ನಪ್ಪಿದ್ದಾರೆ.
ಮುಂಗಾರು ಆರಂಭವಾದ 55 ದಿನಗಳಲ್ಲಿ ರಾಜ್ಯದಲ್ಲಿ 113 ಕಡೆ ಭೂಕುಸಿತ ಉಂಟಾಗಿದ್ದು ಲೋಕೋಪಯೋಗಿ ಇಲಾಖೆಗೆ 2,491 ಕೋಟಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ 1,000 ಕೋಟಿ ನಷ್ಟವಾಗಿದೆ. ಅಲ್ಲದೇ ನಿರಂತರ ಮಳೆಯಿಂದ ರಾಜ್ಯದಲ್ಲಿ ತೀವ್ರ ಹಾನಿಯುಂಟಾಗಿದ್ದು, ಒಟ್ಟು ರಾಜ್ಯಾದ್ಯಂತ 10 ಸಾವಿರ ಕೋಟಿಯಷ್ಟು ಸಂಪತ್ತು ಹಾನಿಯಾಗಿದೆ ಎಂದು ತಿಳಿದುಬಂದಿದೆ.