ಹಿಜಬ್ ಹೋರಾಟದಲ್ಲಿ ಪೊಲೀಸರ ಗುಂಡಿಗೆ 8 ಮಂದಿ ಬಲಿ!

ಗುರುವಾರ, 22 ಸೆಪ್ಟಂಬರ್ 2022 (08:23 IST)
ತೆಹ್ರಾನ್ : ಕಟ್ಟರ್ವಾದಿ ಮುಸ್ಲಿಮ್ ದೇಶ ಇರಾನ್ನಲ್ಲಿ ಇದೀಗ ಕ್ರಾಂತಿಯೊಂದು ನಡೆಯುತ್ತಿದೆ. ಮಹ್ಸಾ ಅಮಿನಿ ಲಾಕಪ್ ಡೆತ್ ನಂತರ ಹಿಜಬ್ ವಿರುದ್ಧ ಸಿಡಿದಿರುವ ಮಹಿಳಾ ಲೋಕ ಅಲ್ಲಿನ ಸರ್ಕಾರಕ್ಕೆ ಸವಾಲಾಗಿ ಪರಿಣಮಿಸಿದೆ.

ಸತತ ಆರನೇ ದಿನ ಇರಾನ್ನ ಬಹುತೇಕ ನಗರ, ಪಟ್ಟಣಗಳಲ್ಲಿ ಮಹಿಳೆಯರ ಪ್ರತಿಭಟನೆಗಳು ಮುಂದುವರಿದಿವೆ. ಸಾವಿರ ಸಾವಿರ ಮಂದಿ ಮಹಿಳೆಯರು ಹಗಲು ರಾತ್ರಿ ಎನ್ನದೇ ಕೆರ್ಮಾನ್ನ ಆಜಾದಿ ವೃತ್ತದಲ್ಲಿ, ಸರ್ವಾಧಿಕಾರ ನಶಿಸಲಿ.

ಹಿಜಬ್ ಕಟ್ಟುಪಾಡು ನಶಿಸಲಿ ಎಂದು ಘೋಷಣೆ ಕೂಗುತ್ತಿದ್ದಾರೆ. ಕತ್ತರಿ ಹಿಡಿದು ಕೂದಲು ಕತ್ತರಿಸಿಕೊಳ್ಳುವ ಅಭಿಯಾನವನ್ನು ಮುಂದುವರಿಸಿದ್ದಾರೆ. ಹಿಜಬ್ ಸುಟ್ಟು ಆಕ್ರೋಶ ಹೊರಹಾಕುತ್ತಿದ್ದಾರೆ. ನಾವು ಯುದ್ಧ ಭೂಮಿಯಲ್ಲಿ ಹುಟ್ಟಿದವರು. ಬನ್ನಿ ನಮ್ಮನ್ನು ಎದುರಿಸಿ ಎಂದು ಸರ್ಕಾರಕ್ಕೆ ಸವಾಲು ಹಾಕುತ್ತಿದ್ದಾರೆ.

ಪ್ರತಿಭಟನೆ ದಮನಿಸಲು ರೈಸಿ ಸರ್ಕಾರ ಬಲಪ್ರಯೋಗ ಮಾಡುತ್ತಿದೆ. ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸಿದೆ. ಈವರೆಗೂ ಪೊಲೀಸರ ಗುಂಡಿಗೆ ದೇಶದ ವಿವಿಧೆಡೆ 8 ಮಂದಿ ಬಲಿ ಆಗಿದ್ದಾರೆ. ಪ್ರತಿಭಟನಾಕಾರರು ಮಾತ್ರ ಹಿಂದೆ ಸರಿಯಲು ಸಿದ್ಧರಿಲ್ಲ. ಇದು ಇರಾನ್ ಸರ್ಕಾರಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ