ರಾಜ್ಯಾದ್ಯಂತ ವರುಣನ ಅಬ್ಬರಕ್ಕೆ ಸಾಕಷ್ಟು ಜೀವಗಳ ಬಲಿ !

ಬುಧವಾರ, 3 ಆಗಸ್ಟ್ 2022 (08:01 IST)
ಬೆಂಗಳೂರು  : ಹಲವು ದಿನಗಳಿಂದ ರಾಜ್ಯದ 13ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ವಿವಿಧ ಜಿಲ್ಲೆಗಳಲ್ಲಿ 13 ಮಂದಿ ಮೃತಪಟ್ಟಿದ್ದಾರೆ.
 
ಇಷ್ಟಕ್ಕೇ ನಿಲ್ಲದೇ ರಾಜ್ಯಾದ್ಯಂತ ಮುಂದಿನ 4 ದಿನಗಳ ಕಾಲ ಭರ್ಜರಿ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಗಳಲ್ಲಿ ಆಗಸ್ಟ್ 6ರ ವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಕೊಡಗು ಜಿಲ್ಲೆಯಲ್ಲಿ ಮತ್ತೆ ಮಳೆ ಆಗ್ತಿದ್ದು, ಮಡಿಕೇರಿ ತಾಲೂಕಿನ ಕೊಯಿನಾಡು ಗ್ರಾಮದಲ್ಲಿ ಸರ್ಕಾರಿ ಶಾಲೆಯ ಮೇಲೆ ಬೃಹತ್ ಗುಡ್ಡ ಕುಸಿದಿದೆ.

ಮಂಗಳೂರು ಮಡಿಕೇರಿ ರಾಷ್ಟ್ರೀಯ ಹೆದ್ದಾರಿ ಮೇಲೆ ಪಯಸ್ವಿನಿ ನದಿ ನೀರು ಬಂದಿದ್ದು ರಸ್ತೆ ಬದಿಯ ಮನೆಗಳಿಗೆ ನೀರು ನುಗ್ಗಿದೆ. ಇದರಿಂದ ಮನೆ ಮುಂಭಾಗದಲ್ಲಿ ನಿಲ್ಲಿಸಿದ ಕಾರುಗಳು ನೀರಿನ ರಭಸಕ್ಕೆ ತೇಲಾಡಿವೆ. 

ಪ್ರವಾಹದ ಪರಿಸ್ಥಿತಿಯನ್ನು ಎದುರಿಸುತ್ತಿರುವ ಕೊಯನಾಡಿಗೆ ವಿರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲೂಕಿನ ರಾರಾವಿ ಗ್ರಾಮ ಬಳಿ ವೇದಾವತಿ ನದಿ ಉಕ್ಕಿ ಹರಿಯುತ್ತಿದೆ.

ಸೇತುವೆ ದಾಟಲು ಹೋಗಿ ನದಿಗೆ ಲಾರಿ ಬಿದ್ದು ಕ್ಲೀನರ್ ಮತ್ತು ಚಾಲಕ ರಕ್ಷಣೆಗಾಗಿ ಪರದಾಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ