ಇಂದಿನಿಂದ ಶಾಲೆಗಳಿಗೆ ಹೊಸ ಮಾರ್ಗಸೂಚಿ

ಶುಕ್ರವಾರ, 15 ಏಪ್ರಿಲ್ 2022 (10:19 IST)
ನವದೆಹಲಿ : ದೆಹಲಿ ಸರ್ಕಾರವು ಇಂದು (ಏ.15)ಯಿಂದಲೇ ಇಲ್ಲಿನ ಶಾಲೆಗಳಿಗೆ ಹೊಸ ಕೋವಿಡ್ ಮಾರ್ಗಸೂಚಿ ನೀಡಲಿದೆ ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಹೇಳಿದ್ದಾರೆ.

ರಾಷ್ಟ್ರರಾಜಧಾನಿಯಲ್ಲಿ ಕೆಲವು ಶಾಲಾ ಮಕ್ಕಳಿಗೆ ಕೊರೊನಾ ಪಾಸಿಟವ್ ಕಾಣಿಸಿಕೊಂಡಿದ್ದು ಈ ಹಿನ್ನೆಲೆ ಪ್ರತಿಕ್ರಿಯಿಸಿದ ಅವರು, ಕೋವಿಡ್-19 ಪ್ರಕರಣಗಳ ಸಂಖ್ಯೆ ಸ್ವಲ್ಪ ಮಟ್ಟಿಗೆ ಹೆಚ್ಚಾಗಿದೆ.

ಆದರೆ, ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆಯಲ್ಲಿ ಏರಿಕೆ ಕಂಡುಬಂದಿಲ್ಲ. ಆದ್ದರಿಂದ ಆತಂಕ ಪಡಬೇಕಿಲ್ಲ. ನಾವು ನಿರಂತರವಾಗಿ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದೇವೆ. ಜನರೂ ಸಹ ಕೊರೊನಾದೊಂದಿಗೆ ಬದುಕುವುದನ್ನು ಕಲಿಯಬೇಕಿದೆ ಎಂದು ಅವರು ಹೇಳಿದ್ದಾರೆ.  

ಆರೋಗ್ಯ ಇಲಾಖೆ ನೀಡಿರುವ ಅಂಕಿ-ಅಂಶಗಳ ಪ್ರಕಾರ, ಕೆಲ ದಿನಗಳಲ್ಲಿ ಶಾಲಾ ಮಕ್ಕಳಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿರುವುದಾಗಿ ಪೋಷಕರು ಮಾಹಿತಿ ನೀಡಿದ್ದಾರೆ. ಈ ನಿಟ್ಟಿನಲ್ಲಿ ದೆಹಲಿಯ ಶಾಲೆಗಳಿಗೆ ಇಂದಿನಿಂದ ಹೊಸ ಮಾರ್ಗಸೂಚಿಯನ್ನು ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ