ನವದೆಹಲಿ : ಸೂರ್ಯನ ಅಧ್ಯಯನಕ್ಕೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಉಡಾವಣೆ ಮಾಡಿರುವ ಆದಿತ್ಯ ಎಲ್1 ನೌಕೆಯನ್ನು ಮತ್ತೊಂದು ಕಕ್ಷೆಗೆ ಯಶಸ್ವಿಯಾಗಿ ಏರಿಸಲಾಗಿದೆ. ಕಕ್ಷೆ ಎತ್ತರಿಸುವ 3ನೇ ಪ್ರಕ್ರಿಯೆಯು ಯಶಸ್ವಿಯಾಗಿದೆ ಎಂದು ಇಸ್ರೋ ತಿಳಿಸಿದೆ.
ಯಶಸ್ವಿ ಕಾರ್ಯಾಚರಣೆಯ ನಂತರ, ಆದಿತ್ಯ ನೌಕೆಯು ಈಗ 296 ಕಿಮೀ x 71767 ಕಿ.ಮೀ. ಎತ್ತರದ ಕಕ್ಷೆಯಲ್ಲಿ ಪರಿಭ್ರಮಣೆ ನಡೆಸುತ್ತಿದೆ. ಮುಂದಿನ ಕಾರ್ಯಾಚರಣೆಯನ್ನು ಸೆಪ್ಟೆಂಬರ್ 15 ರಂದು ಮುಂಜಾನೆ 2 ಗಂಟೆಗೆ ನಿಗದಿಪಡಿಸಲಾಗಿದೆ ಎಂದು ಇಸ್ರೋ ತಿಳಿಸಿದೆ.
ಸೂರ್ಯನನ್ನು ಅಧ್ಯಯನ ಮಾಡುವ ಇಸ್ರೋದ ಮಹತ್ವಾಕಾಂಕ್ಷೆಯ ಮಿಷನ್ ಸೆಪ್ಟೆಂಬರ್ 2 ರಂದು ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆಯಾಯಿತು.
ಆದಿತ್ಯ-ಎಲ್1 ಬಾಹ್ಯಾಕಾಶ ನೌಕೆಯು ಭೂಮಿಯಿಂದ 15 ಲಕ್ಷ ಕಿ.ಮೀ ದೂರದಲ್ಲಿರುವ ಲಾಗ್ರೇಂಜ್ ಪಾಯಿಂಟ್ 1 ಅಥವಾ ಎಲ್-1 ಪಾಯಿಂಟ್ನಿಂದ ಸೂರ್ಯನನ್ನು ಅಧ್ಯಯನ ನಡೆಸಲಿದೆ. ISಖಔ ಪ್ರಕಾರ, ಐ1 ಬಿಂದುವಿನ ಸುತ್ತ ಹಾಲೋ ಕಕ್ಷೆಯಲ್ಲಿ ಇರಿಸಲಾದ ಬಾಹ್ಯಾಕಾಶ ನೌಕೆಯು ಯಾವುದೇ ಗ್ರಹಣಗಳಿಲ್ಲದೆ ಸೂರ್ಯನನ್ನು ನಿರಂತರವಾಗಿ ವೀಕ್ಷಿಸುವ ಪ್ರಯೋಜನವನ್ನು ಹೊಂದಿದೆ.