ಹಿಜಬ್ ವಿವಾದಕ್ಕೆ ತಾತ್ಕಾಲಿಕ ಬ್ರೇಕ್ !

ಶುಕ್ರವಾರ, 11 ಫೆಬ್ರವರಿ 2022 (06:09 IST)
ಬೆಂಗಳೂರು : ರಾಜ್ಯದಲ್ಲಿ ಹಿಜಬ್-ಕೇಸರಿ ಫೈಟ್ಗೆ ಹೈಕೋರ್ಟ್ ತಾತ್ಕಾಲಿಕವಾಗಿ ಬ್ರೇಕ್ ಹಾಕಿದೆ.

ಇವತ್ತು ಎರಡೂವರೆ ಗಂಟೆ ಸುದೀರ್ಘ ವಿಚಾರಣೆ ನಡೆಸಿದ ಹೈಕೋರ್ಟ್ ತ್ರಿಸದಸ್ಯ ಪೀಠ, ಮುಂದಿನ ಮುಂದಿನ ಆದೇಶ ನೀಡುವವರೆಗೆ ಕಾಲೇಜು ವಿದ್ಯಾರ್ಥಿಗಳು ಯಾವುದೇ ಧಾರ್ಮಿಕ ವಸ್ತ್ರ ಬಳಸಬಾರದೆಂದು ಸೂಚನೆ ನೀಡಿದೆ.

ಇಂದು ಹಿಜಬ್ ವಿವಾದಕ್ಕೆ ಸಂಬಂಧಿಸಿ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾ.ಕೃಷ್ಣ ದೀಕ್ಷಿತ್ ಮತ್ತು ನ್ಯಾ. ಖಾಜಿ ಜೈಬುನ್ನಿಸಾ ಅವರ ತ್ರಿಸದಸ್ಯ ಪೀಠ ಐದು ಅರ್ಜಿಗಳ ವಿಚಾರಣೆ ನಡೆಸಿತು.

ಹೈಕೋರ್ಟ್ ಸೂಚನೆ ಅನ್ವಯ, ಹಿಜಬ್ ಅಥವಾ ಕೇಸರಿ ಶಾಲುಗಳನ್ನು ಧರಿಸಿ ತರಗತಿಗಳಿಗೆ ಹಾಜರಾಗುವಂತಿಲ್ಲ. ಸದ್ಯಕ್ಕೆ ಯಥಾಸ್ಥಿತಿ ಕಾಪಾಡಲು ಕೋರ್ಟ್ ಸೂಚಿಸಿದ್ದು, ಸಮವಸ್ತ್ರ ಧರಿಸಿಯೇ ಕಾಲೇಜಿಗೆ ಹಾಜರಾಗಬೇಕಿದೆ. ಮಕ್ಕಳ ಹಿತದೃಷ್ಟಿಯಿಂದ ಶಾಲೆ-ಕಾಲೇಜು ಪುನಾರಂಭ ಮಾಡುವಂತೆ ಸರ್ಕಾರಕ್ಕೆ ಪೀಠ ನಿರ್ದೇಶನ ನೀಡಿದೆ.

ಇದು ಅಂತಿಮ ಆದೇಶವಲ್ಲ ಅಂತ ಕೋರ್ಟ್ ಸ್ಪಷ್ಟಪಡಿಸಿದ್ದು, ಸೋಮವಾರದಿಂದ ಪ್ರತಿನಿತ್ಯ ವಿಚಾರಣೆ ನಡೆಸಿ ಆದೇಶ ನೀಡುವುದಾಗಿಯೂ ತಿಳಿಸಿದೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ