ಅವಿವಾಹಿತೆಗೂ ಗರ್ಭಪಾತಕ್ಕೆ ಅವಕಾಶ : ಸುಪ್ರೀಂ ತೀರ್ಪು

ಶುಕ್ರವಾರ, 22 ಜುಲೈ 2022 (12:22 IST)
ನವದೆಹಲಿ : ಒಮ್ಮತದ ಸಂಬಂಧದಿಂದ ಅವಿವಾಹಿತೆ ಗರ್ಭಧರಿಸಿದ್ದರೆ, ಆಕೆ ಇಚ್ಛಿಸಿದರೆ ಗರ್ಭಪಾತಕ್ಕೆ ಅವಕಾಶ ನಿರಾಕರಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪೊಂದನ್ನು ಹೊರಡಿಸಿದೆ.

ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್, ಸೂರ್ಯ ಕಾಂತ್ ಮತ್ತು ಎ.ಎಸ್.ಬೋಪಣ್ಣ ಅವರ ಪೀಠವು, ಅವಿವಾಹಿತೆ ಪರೀಕ್ಷಿಸಲು ಇಬ್ಬರು ವೈದ್ಯರ ವೈದ್ಯಕೀಯ ಮಂಡಳಿಯನ್ನು ಸ್ಥಾಪಿಸಲು ಏಮ್ಸ್ ನಿರ್ದೇಶಕರಿಗೆ ನಿರ್ದೇಶನ ನೀಡಿದೆ.

ಎಂಟಿಪಿ ಕಾಯ್ದೆಯ ಸೆಕ್ಷನ್ 3(2)(ಡಿ) ಅಡಿಯಲ್ಲಿ ಮಂಡಳಿ ರಚಿಸಬೇಕು. ಆಕೆಯ ಜೀವಕ್ಕೆ ಅಪಾಯ ಆಗದಂತೆ ಗರ್ಭಪಾತ ಮಾಡಬೇಕು ಎಂದು ಆದೇಶಿಸಿತು. 

ವೈದ್ಯಕೀಯ ಗರ್ಭಪಾತ ಕಾಯ್ದೆಗೆ 2021ರಲ್ಲಿ ತಂದಿರುವ ತಿದ್ದುಪಡಿಯು ಅವಿವಾಹಿತೆಯೂ ಒಳಗೊಳ್ಳುವಂತೆ ಪತಿಗೆ ಬದಲಾಗಿ ʼಪಾರ್ಟ್ನರ್ʼ ಎಂಬ ಪದ ಬಳಸಿದೆ ಎಂದು ಪೀಠವು ಹೇಳಿದೆ.
ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, 20-24 ವಾರಗಳ ಭ್ರೂಣದ ಗರ್ಭಪಾತಕ್ಕೆ ವಿಧವೆ ಅಥವಾ ವಿಚ್ಛೇದಿತ ಮಹಿಳೆಗೂ ಅನುಮತಿಸಲಾಗಿದೆ. ಆದರೆ ಈ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ಅನಪೇಕ್ಷಿತ ದೃಷ್ಟಿಕೋನ ಹೊಂದಿದೆ ಎಂದು ಕೋರ್ಟ್ ಹೇಳಿತು.

ಅಲ್ಲದೇ ಈ ಕಾನೂನು ನಿಯಮಗಳ ವ್ಯಾಖ್ಯಾನ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿತು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ