ಎನ್‌ಸಿಸಿಎಫ್, ನಾಫೆಡ್, ಕೇಂದ್ರೀಯ ಭಂಡಾರಗಳಿಂದ ಅಕ್ಕಿ ಪಡೆಯಲು ಕ್ರಮ: ಸಿದ್ದರಾಮಯ್ಯ

ಮಂಗಳವಾರ, 20 ಜೂನ್ 2023 (09:27 IST)
ಬೆಂಗಳೂರು : ನ್ಯಾಷನಲ್ ಕೋ-ಆಪರೇಟಿವ್ ಕನ್ಸ್ಯೂಮರ್ಸ್ ಫೆಡರೇಷನ್, ನ್ಯಾಷನಲ್ ಅಗ್ರಿಕಲ್ಚರಲ್ ಕೋ-ಆಪರೇಟಿವ್ ಮಾರ್ಕೆಟಿಂಗ್ ಫೆಡರೇಷನ್ ಹಾಗೂ ಕೇಂದ್ರೀಯ ಭಂಡಾರ ಈ ಮೂರು ಸಂಸ್ಥೆಗಳು ಭಾರತ ಸರ್ಕಾರಕ್ಕೆ ಸೇರಿದ್ದು, ಅಲ್ಲಿಂದ ಅಕ್ಕಿ ಪಡೆಯಲು ದರಪಟ್ಟಿ ಕರೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
 
ಅವರು ಸೋಮವಾರ ಗೃಹ ಕಚೇರಿ ಕೃಷ್ಣಾದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಭಾರತೀಯ ಆಹಾರ ಮಂಡಳಿಯಿಂದ 34 ರೂ. ಅಕ್ಕಿ, 2.60 ರೂ. ಸಾಗಾಣಿಕೆ ವೆಚ್ಚ ಸೇರಿ ಒಂದು ಕೆಜಿ ಅಕ್ಕಿಗೆ ಒಟ್ಟು 36.40 ರೂ. ವೆಚ್ಚ ತಗಲುತ್ತದೆ.

ಈ ಮೂರು ಸಂಸ್ಥೆಗಳು ನಮೂದಿಸುವ ದರ, ಸರಬರಾಜು ಮಾಡುವ ಪ್ರಮಾಣಗಳ ವಿವರ ಪಡೆಯಲಾಗುವುದು. ಟೆಂಡರ್ ಮೂಲಕ ಅಕ್ಕಿ ಪಡೆಯಲೂ ಕ್ರಮ ಕೈಗೊಳ್ಳಲಾಗುವುದು ಎಂದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ