12 ಜಾತಿಗಳು ಎಸ್ಟಿ ವರ್ಗಕ್ಕೆ ಸೇರ್ಪಡೆ : ನರೇಂದ್ರ ಮೋದಿ

ಗುರುವಾರ, 15 ಸೆಪ್ಟಂಬರ್ 2022 (08:51 IST)
ಬೆಂಗಳೂರು : ರಾಜ್ಯದ ಬೆಟ್ಟಕುರುಬ ಸೇರಿದಂತೆ ಒಟ್ಟು 12 ಜಾತಿಗಳನ್ನು ಪರಿಶಿಷ್ಟ ಪಂಗಡಗಳ ವರ್ಗಕ್ಕೆ ಸೇರ್ಪಡೆಗೊಳಿಸಲು ಕೇಂದ್ರ ಸಂಪುಟ ಅನುಮೋದನೆ ನೀಡಿದೆ.
 
ಮಾಜಿ ಸಿಎಂ ಯಡಿಯೂರಪ್ಪ ಟ್ವೀಟ್ ಮಾಡಿ ಈ ಮಹತ್ವದ ನಿರ್ಧಾರವನ್ನು ತೆಗೆದುಕೊಂಡ ಪ್ರಧಾನಿ ನರೇಂದ್ರ ಮೋದಿ ಸರ್ಕಾರವನ್ನು ಅಭಿನಂದಿಸಿದ್ದಾರೆ.  

ತಮ್ಮ ಟ್ವೀಟ್ನಲ್ಲಿ, ಇಂದು ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಸಂಪುಟ ಸಭೆಯಲ್ಲಿ ನಮ್ಮ ರಾಜ್ಯದ ಬೆಟ್ಟಕುರುಬ ಸೇರಿದಂತೆ ಒಟ್ಟು 12 ಜಾತಿಗಳನ್ನು ಪರಿಶಿಷ್ಟ ಪಂಗಡಗಳ ವರ್ಗಕ್ಕೆ ಸೇರ್ಪಡೆಗೊಳಿಸುವ ನಿರ್ಧಾರ ಕೈಗೊಳ್ಳಲಾಗಿರುವುದು ಸ್ವಾಗತಾರ್ಹ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ