ನವದೆಹಲಿ : ಸೂರ್ಯನನ್ನು ಅಧ್ಯಯನ ಮಾಡುವ ಭಾರತದ ಮೊದಲ ಬಾಹ್ಯಾಕಾಶ-ಆಧಾರಿತ ಮಿಷನ್ ಆದಿತ್ಯ-ಎಲ್ 1 ಬಾಹ್ಯಾಕಾಶ ನೌಕೆಯು ಭೂಮಿಯ ಕಕ್ಷೆಯಿಂದ ಹೊರನಡೆದು, ಲಾಗ್ರೇಂಜ್ ಪಾಯಿಂಟ್ 1 (ಎಲ್ 1) ಕಡೆಗೆ ಹೆಜ್ಜೆ ಇಟ್ಟಿದೆ.
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಟ್ರಾನ್ಸ್-ಲಗ್ರಾಂಜಿಯನ್ ಪಾಯಿಂಟ್ 1 ಕಕ್ಷೆ ಎತ್ತರಿಸುವ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸಿತು. ಐ1 ಗೆ ಬಾಹ್ಯಾಕಾಶ ನೌಕೆಯ 110 ದಿನಗಳ ಪ್ರಯಾಣ ಈಗ ಆರಂಭಗೊಂಡಿದೆ. ಈ ಕುರಿತು ಇಸ್ರೋ, ಸೋಷಿಯಲ್ ಮೀಡಿಯಾ ಎಕ್ಸ್ನಲ್ಲಿ ಪೋಸ್ಟ್ ಹಾಕಿದೆ.
ಖಿಐ1I ಭೂಮಿಯಿಂದ ಸುಮಾರು 15 ಲಕ್ಷ ಕಿಮೀ ದೂರದಲ್ಲಿರುವ ಐ1 ಪಾಯಿಂಟ್ ಕಡೆಗೆ ಭೂ ಕಕ್ಷೆಯಿಂದ ಬಾಹ್ಯಾಕಾಶ ನೌಕೆಯನ್ನು ಕಳುಹಿಸಿದೆ. ಆದಿತ್ಯ ನೌಕೆಯು ಈಗ ಸೂರ್ಯ-ಭೂಮಿ ಎಲ್1 ಪಾಯಿಂಟ್ ಕಡೆಗೆ ಪ್ರಯಾಣ ಆರಂಭಿಸಿದೆ.