ಇನ್ಮುಂದೆ ವಿಮಾನ ಪ್ರಯಾಣ ದುಬಾರಿ!

ಗುರುವಾರ, 11 ಆಗಸ್ಟ್ 2022 (12:12 IST)
ನವದೆಹಲಿ : ಕೊರೊನಾ ಸೋಂಕು ಕಾಣಿಸಿಕೊಂಡ ಬಳಿಕ ವಿಮಾನ ಪ್ರಯಾಣ ದರದ ಮೇಲಿನ ಮಿತಿಗಳನ್ನು ಇದೀಗ ಸರ್ಕಾರ ಕೊನೆಗೊಳಿಸಲು ನಿರ್ಧರಿಸಿದ್ದು,

ಆಗಸ್ಟ್ 31 ರಿಂದ ಪ್ರಯಾಣಿಕರಿಗೆ ಶುಲ್ಕ ವಿಧಿಸಲು ವಿಮಾನಯಾನ ಸಂಸ್ಥೆಗಳಿಗೆ ಮುಕ್ತ ಅವಕಾಶ ಕಲ್ಪಿಸಿಕೊಡಲು ಕೇಂದ್ರ ವಿಮಾನಯಾನ ಸಚಿವಾಲಯ ನಿರ್ಧರಿಸಿದೆ.

ಈ ಬಗ್ಗೆ ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿರುವ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ದೈನಂದಿನ ಬೇಡಿಕೆ ಮತ್ತು ವಿಮಾನ ಇಂಧನ (ಎಟಿಎಫ್) ಬೆಲೆಗಳನ್ನು ಎಚ್ಚರಿಕೆಯಿಂದ ವಿಶ್ಲೇಷಿಸಿದ ನಂತರ ವಿಮಾನ ಪ್ರಯಾಣ ದರದ ಮೇಲಿನ ಮಿತಿಯನ್ನು ರದ್ದುಗೊಳಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

ನಿಧಾನವಾಗಿ ವಿಮಾನಗಳಲ್ಲಿ ಪ್ರಯಾಣಿಕರ ಸಂಖ್ಯೆ ಏರಿಕೆ ಕಾಣುತ್ತಿದೆ. ದೇಶೀಯ ಸಂಚಾರಕ್ಕೆ ವಿಮಾನಗಳು ಸಿದ್ಧವಾಗಿದೆ ಎಂದು ನಮಗೆ ವಿಶ್ವಾಸವಿದೆ. ಹಾಗಾಗಿ ವಿಮಾನಯಾನ ಸಂಸ್ಥೆಗಳು ಪ್ರಯಾಣಿಕರಿಗೆ ಶುಲ್ಕ ವಿಧಿಸಲು ಮುಕ್ತ ಅವಕಾಶ ನೀಡಲಾಗಿದೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ