16 ಜಿಲ್ಲೆಗಳಿಗೆ ಅಲರ್ಟ್ ಘೋಷಣೆ?

ಭಾನುವಾರ, 17 ಅಕ್ಟೋಬರ್ 2021 (08:48 IST)
ಬೆಂಗಳೂರು(ಅ.17) : ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಮಳೆಯ ಆರ್ಭಟ ಹೆಚ್ಚಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧೆಡೆ ಎಡಬಿಡದೆ ಮಳೆ ಸುರಿಯುತ್ತಿದೆ.

ಅಲ್ಲದೇ ನೈರುತ್ಯ ಮುಂಗಾರು ಚುರುಕುಗೊಂಡಿರುವುದರಿಂದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಇಂದು ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ  ಎಂದು ಭಾರತೀಯ  ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.  ಹಾಗಾಗಿ ಮೈಸೂರು, ಮಂಡ್ಯ, ಕೊಡಗು, ಚಿಕ್ಕಮಗಳೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಅಧಿಕ  ಮಳೆಯಾಗುವ ನಿರೀಕ್ಷೆ ಇರುವುದರಿಂದ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ರಾಮನಗರ, ಕೋಲಾರ, ಹಾಸನ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ