ಕೊನೆಯ ಅಧಿವೇಶನಕ್ಕೆ ಸಕಲ ಸಿದ್ಧತೆ

ಶುಕ್ರವಾರ, 15 ಜುಲೈ 2022 (08:03 IST)
ನವದೆಹಲಿ : ನೂರು ವರ್ಷಗಳ ಇತಿಹಾಸವುಳ್ಳ ಸಂಸತ್ ಭವನ ಶೀಘ್ರವೇ ಇತಿಹಾಸದ ಪುಟಗಳನ್ನು ಸೇರಲಿದೆ.

ಹಾಲಿ ಸಂಸತ್ ಭವನದಲ್ಲಿ ಜುಲೈ 18 ರಿಂದ ಆಗಸ್ಟ್ 12 ರವರೆಗೆ ಮಳೆಗಾಲದ ಸಂಸತ್ ಅಧಿವೇಶನ ನಡೆಯಲಿದೆ. ಇದೇ ಕೊನೆಯ ಅಧಿವೇಶನ ಆಗಲಿದೆ.

ಸೋಮವಾರದಿಂದ ಮಳೆಗಾಲದ ಸಂಸತ್ ಅಧಿವೇಶನ ಪ್ರಾರಂಭವಾಗುತ್ತಿದೆ. ಬಳಿಕ ಡಿಸೆಂಬರ್ನಲ್ಲಿ ನಡೆಯುವ ಚಳಿಗಾಲದ ಅಧಿವೇಶನವನ್ನು ಸೆಂಟ್ರಲ್ ವಿಸ್ತಾ ಭಾಗವಾಗಿ ಮೋದಿ ಸರ್ಕಾರ ನಿರ್ಮಿಸುತ್ತಿರುವ ನೂತನ ಸಂಸತ್ ಭವನದಲ್ಲಿ ನಡೆಸುವುದಾಗಿ ಈಗಾಗಲೇ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಘೋಷಿಸಿದ್ದಾರೆ.

ಹಾಲಿ ಸಂಸತ್ ಭವನದಲ್ಲಿಯೇ ನೂತನ ರಾಷ್ಟ್ರಪತಿ ಚುನಾವಣೆ ಜುಲೈ 19 ರಂದು ನಡೆಯಲಿದೆ. ಆಗಸ್ಟ್ 6 ರಂದು ಉಪರಾಷ್ಟ್ರಪತಿ ಚುನಾವಣೆಯೂ ಇಲ್ಲಿಯೇ ನಡೆಯಲಿದೆ. 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ