ಯಡಿಯೂರಪ್ಪ ಜತೆಗೆ ನಾಲ್ವರು ಸಚಿವರ ಪ್ರಮಾಣ ವಚನ
ರಾಜಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಯಡಿಯೂರಪ್ಪ ಜತೆಗೆ ಕೆಎಸ್ ಈಶ್ವರಪ್ಪ, ಗೋವಿಂದ ಕಾರಜೋಳ, ಬಿ ಶ್ರೀರಾಮುಲು ಮತ್ತು ಆರ್ ಅಶೋಕ್ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.
ಬಿಜೆಪಿ ಪ್ರಣಾಳಿಕೆಯಲ್ಲಿ ಘೋಷಿಸಿದ ಸಾಲ ಮನ್ನಾ ನಿರ್ಧಾರವನ್ನು ನಾಳೆಯೇ ನೂತನ ಮುಖ್ಯಮಂತ್ರಿ ಯಡಿಯೂರಪ್ಪ ಘೋಷಿಸಲಿದ್ದಾರೆ ಎನ್ನಲಾಗಿದೆ. ಇದರ ಜತೆಗೆ ಬಿಜೆಪಿ ಪ್ರಣಾಳಿಕೆಯಲ್ಲಿರುವ ಪ್ರಮುಖ ಅಂಶಗಳನ್ನು ನಾಳೆಯೇ ಯಡಿಯೂಪ್ಪ ಸಂಪುಟ ಸದಸ್ಯರೊಂದಿಗೆ ಘೋಷಣೆ ಮಾಡಲಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.