ಇಂದಿನಿಂದ ಅಮರನಾಥ ಯಾತ್ರೆ ಆರಂಭ

ಗುರುವಾರ, 30 ಜೂನ್ 2022 (10:16 IST)
ಶ್ರೀನಗರ : ಸತತ 2 ವರ್ಷಗಳ ನಂತರ ಅಮರನಾಥ ಯಾತ್ರೆ ಮತ್ತೆ ಪ್ರಾರಂಭವಾಗಿದ್ದು, ಸುಮಾರು 2,750 ಯಾತ್ರಿಕರ ಬ್ಯಾಚ್ ಇಂದು ಯಾತ್ರೆಯನ್ನು ಪ್ರಾರಂಭಿಸಿದ್ದಾರೆ.

ದಕ್ಷಿಣ ಕಾಶ್ಮೀರ ಹಿಮಾಲಯದಲ್ಲಿ ಸ್ವಾಭಾವಿಕವಾಗಿ ರೂಪುಗೊಂಡ ಮಂಜುಗಡ್ಡೆಯ ಲಿಂಗವನ್ನು ಹೊಂದಿರುವ ಗುಹಾ ದೇಗುಲ ಜಗತ್ಪ್ರಸಿದ್ಧವಾಗಿದೆ. ಅನಂತನಾಗ್ ಜಿಲ್ಲೆಯ ಪಹಲ್ಗಾಮ್ನಲ್ಲಿರುವ ನುನ್ವಾನ್ ಬೇಸ್ ಕ್ಯಾಂಪ್ನಲ್ಲಿ ಜಿಲ್ಲಾಧಿಕಾರಿ ಪಿಯೂಷ್ ಸಿಂಗ್ಲಾ ಅವರು ಯಾತ್ರೆಗೆ ಚಾಲನೆ ನೀಡಿದರು.

ಪ್ರಯಾಣವು ಬಹುತೇಕ ಕಾಲ್ನಡಿಗೆಯಲ್ಲೇ ಪ್ರಯಾಣಿಸುತ್ತಾರೆ, ಮಾರ್ಗದುದ್ದಕ್ಕೂ ಶೀಷ್ನಾಗ್ ಮತ್ತು ಪಂಚತಾರ್ಣಿಯಲ್ಲಿ ರಾತ್ರಿ ವ್ಯವಸ್ಥೆ ಮಾಡಲಾಗಿದೆ. 43 ದಿನಗಳ ಯಾತ್ರೆಯನ್ನು ಸುಗಮವಾಗಿ ನಡೆಸಲು ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದರು.

ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಜಮ್ಮು ಬೇಸ್ ಕ್ಯಾಂಪ್ನಿಂದ 4,890 ಯಾತ್ರಾರ್ಥಿಗಳ ಮೊದಲ ಬ್ಯಾಚ್ಗೆ ಚಾಲನೆ ನೀಡಿದರು.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ