ಅಂಬುಲೆನ್ಸ್ ಸೇವೆ ವ್ಯತ್ಯಯ! ಸರ್ಕಾರದ ನಿರ್ಲಕ್ಷ್ಯಕ್ಕೆ ರೋಗಿಗಳು ಕಂಗಾಲು
ಭಾನುವಾರ, 25 ಸೆಪ್ಟಂಬರ್ 2022 (13:21 IST)
ಬೆಂಗಳೂರು : ರಾಜ್ಯದಲ್ಲಿ ಹೆಲ್ತ್ ಎಮರ್ಜೆನ್ಸಿ ದುರಾಗಿದೆಯಾ ಎಂಬ ಅನುಮಾನವೊಂದು ಕಾಡಿದೆ. ಸರ್ಕಾರದ ನಿರ್ಲಕ್ಷ್ಯಕ್ಕೆ ರೋಗಿಗಳು ಕಂಗಾಲಾಗಿದ್ದು, ರಾಜ್ಯದಲ್ಲಿ ಸಾವು-ನೋವಾಗುವ ಸಾಧ್ಯತೆಗಳಿವೆ.
ಅಪಘಾತ ಪ್ರಕರಣಗಳು, ವಿಷಕುಡಿದ ಪ್ರಕರಣಗಳು, ಹಾವು ಕಚ್ಚಿದ ಪ್ರಕರಗಳು, ಹೆರಿಗೆ ಪ್ರಕರಣಗಳು ಸೇರಿದಂತೆ ಅನೇಕ ತುರ್ತು ಚಿಕಿತ್ಸೆಗೆ ಅಂಬುಲೆನ್ಸ್ ಸೇವೆ ಅಗತ್ಯ. ಈ 108 ಅಂಬುಲೆನ್ಸ್ ಸೇವೆಯನ್ನು ಜಿವಿಕೆ ಸಂಸ್ಥೆ ನಡೆಸುತ್ತಾ ಇದೆ.
ರಾಜ್ಯಾದ್ಯಂತ ದಿನಕ್ಕೆ ಸುಮಾರು 8 ಸಾವಿರ ಕರೆಗಳು 108 ಗೆ ಹೋಗುತ್ತವೆ. 8 ಸಾವಿರ ಕರೆಗಳಲ್ಲಿ 2 ಸಾವಿರ ಪ್ರಕರಣಗಳು ಗಂಭೀರ ಆಗಿರುತ್ತವೆ.
ನಿನ್ನೆ ಸಂಜೆಯಿಂದ ಅಂಬುಲೆನ್ಸ್ ಸೇವೆ ಇಲ್ಲದ ಕಾರಣ ಜನರಿಗೆ ತೀರ ಸಮಸ್ಯೆ ಎದುರಾಗಿದೆ. ತಾಂತ್ರಿಕ ಸಮಸ್ಯೆಯಿಂದ 108 ಸೇವೆ ಸಿಗ್ತಿಲ್ಲ ಅಂತಾ ಹೇಳಲಾಗುತ್ತಿದೆ. ತಾಂತ್ರಿಕ ಸಮಸ್ಯೆಯಿಂದ 108ಗೆ ಕರೆ ಹೋಗ್ತಿಲ್ಲ ಮತ್ತು ಕರೆ ಸ್ವೀಕರಿಸ್ತಿಲ್ಲ ಅಂತಾ ಹೇಳಲಾಗುತ್ತಿದೆ.
ಈ ಸಂಬಂಧ ಜಿವಿಕೆ ಟೆಕ್ನಿಕಲ್ ಟೀಂನಿಂದ ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿ, 108 ಸೇವೆಯಲ್ಲಿ ತಾಂತ್ರಿಕ ಸಮಸ್ಯೆ ಆಗಿರೋದು ನಿಜ. ಸರ್ವರ್ ಪ್ರಾಬ್ಲಂನಿಂದ ಕರೆ ಸ್ವೀಕರಿಸಲಾಗುತ್ತಿಲ್ಲ ಎಂದು ಸ್ಪಷ್ಟನೆ ನೀಡಿದೆ.