ಅಗ್ನಿವೀರರಿಗೆ ಆನಂದ್ ಮಹೀಂದ್ರಾ ಕೊಟ್ರು ಬಿಗ್ ಆಫರ್?

ಸೋಮವಾರ, 20 ಜೂನ್ 2022 (10:34 IST)
ನವದೆಹಲಿ : ಕೈಗಾರಿಕೋದ್ಯಮಿ, ಮಹೀಂದ್ರಾ ಗ್ರೂಪ್ನ ಅಧ್ಯಕ್ಷ ಆನಂದ್ ಮಹೀಂದ್ರಾ ಅವರು ಸೋಮವಾರ ಬೆಳಗ್ಗೆ ಟ್ವಿಟ್ಟರ್ನಲ್ಲಿ ಅಗ್ನಿವೀರ್ ಯೋಜನೆಯನ್ನು ಕೇಂದ್ರವು ಹಿಂತೆಗೆದುಕೊಳ್ಳಬೇಕೆಂದು ಒತ್ತಾಯಿಸಿ,
 
ನಡೆಯುತ್ತಿರುವ ಪ್ರತಿಭಟನೆಗಳ ಕುರಿತು ತಮ್ಮ ಆಲೋಚನೆಗಳನ್ನು ಹಂಚಿಕೊಂಡಿದ್ದಾರೆ.

ಅಗ್ನಿಪಥ್ ಸುತ್ತಲಿನ ಹಿಂಸಾಚಾರದಿಂದ ನಾನು ದುಃಖಿತನಾಗಿದ್ದೇನೆ ಎಂದು ಹೇಳಿದ ಅವರು, ನಾಲ್ಕು ವರ್ಷಗಳಲ್ಲಿ ಅಗ್ನಿವೀರರು ಗಳಿಸುವ ಕೌಶಲ್ಯ ಮತ್ತು ಶಿಸ್ತು ಅವರನ್ನು ಉದ್ಯೋಗಿಗಳನ್ನಾಗಿ ಮಾಡುತ್ತದೆ.

ಮಹೀಂದ್ರಾ ಗ್ರೂಪ್ ಅಂತಹ ತರಬೇತಿ ಪಡೆದ ಮತ್ತು ಸಮರ್ಥ ಜನರನ್ನು ನೇಮಿಸಿಕೊಳ್ಳುವ ಅವಕಾಶವನ್ನು ಸ್ವಾಗತಿಸುತ್ತದೆ ಎಂದು ದೊಡ್ಡ ಆಫರ್ ಕೊಟ್ಟಿದ್ದಾರೆ. 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ