ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಪರಿಹಾರ ಘೋಷಣೆ

ಭಾನುವಾರ, 7 ಆಗಸ್ಟ್ 2022 (09:52 IST)
ಇಂದು 21 ಜಿಲ್ಲೆಗಳಿಗೆ 200 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ಜಿಲ್ಲಾಧಿಕಾರಿಗಳು ಜೀವಹಾನಿ, ಮನೆ ಹಾನಿ ಪ್ರಕರಣಗಳಲ್ಲಿ ತ್ವರಿತವಾಗಿ ಪರಿಹಾರ ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
 
ಅತಿವೃಷ್ಟಿಯಿಂದ ಹಾನಿಗೊಳಗಾಗಿ ಸಂಪರ್ಕ ಕಡಿತವಾಗುವ ರಸ್ತೆ, ಸೇತುವೆಗಳ ದುರಸ್ತಿಯನ್ನು ಕೂಡಲೇ ಕೈಗೊಂಡು, ಸಂಪರ್ಕ ಮರುಸ್ಥಾಪಿಸಬೇಕು. ಅಂತೆಯೇ ವಿದ್ಯುತ್ ಕಂಬಗಳು, ಟ್ರಾನ್ಸ್ ಫಾರ್ಮರ್ಗಳ ಹಾನಿ ಕುರಿತು ಜಾಗೃತರಾಗಿ, ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ತ್ವರಿತವಾಗಿ ಮರುಸ್ಥಾಪಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಇದಕ್ಕಾಗಿ ಎಸ್ಕಾಂಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಹೆಚ್ಚುವರಿ ವಿದ್ಯುತ್ ಕಂಬಗಳು, ಟ್ರಾನ್ಸ್ ಫಾರ್ಮರ್ಗಳ ದಾಸ್ತಾನು ಖಾತರಿಪಡಿಸಲು ಸೂಚಿಸಿದರು.

ಬೆಳೆಹಾನಿ ಜಂಟಿ ಸಮೀಕ್ಷೆಯನ್ನು ತ್ವರಿತವಾಗಿ ನಡೆಸಿ, ಬೆಳೆ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಬೇಕು. ಹಾನಿ ಸಮೀಕ್ಷೆ ವಾಸ್ತವಿಕವಾಗಿರಬೇಕು ಎಂದರು.   ಗದಗ ಜಿಲ್ಲೆಯ ಬೆಣ್ಣಿಹಳ್ಳ, ಹಾವೇರಿ ಜಿಲ್ಲೆಯ ವರದಾ ನದಿ ಮತ್ತು ಇತರ ಕೆಲವು ಪ್ರದೇಶಗಳಲ್ಲಿ ದಿಢೀರ್ ಪ್ರವಾಹ ಉಂಟಾಗುವ ಸ್ಥಳಗಳಲ್ಲಿ ಸೂಕ್ತ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದರು.

ಅಣೆಕಟ್ಟುಗಳಿಂದ ನೀರು ಬಿಡುಗಡೆ ಮಾಡುವಾಗ ಆಣೆಕಟ್ಟುಗಳ ಕೆಳ ಭಾಗದ ಗ್ರಾಮಸ್ಥರಿಗೆ ಮುನ್ನೆಚ್ಚರಿಕೆ ನೀಡಬೇಕು. ರಾಜ್ಯದ ಹಲವಾರು ಕೆರೆಗಳು ತುಂಬಿದ್ದು, ಅಪಾಯದ ಅಂಚಿನ ಕೆರೆಗಳು ಒಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ