ದೇಶಕ್ಕೆ ಇನ್ನೊಂದು ಗಂಡಾಂತರ ಕಾದಿದೆ : ಕೋಡಿ ಮಠ ಶ್ರೀ ಭವಿಷ್ಯ
ಶನಿವಾರ, 10 ಜೂನ್ 2023 (08:45 IST)
ಕೋಲಾರ : ದೇಶಕ್ಕೆ ಇನ್ನೂ ಒಂದು ಗಂಡಾಂತರ ಕಾದಿದೆ. ಈ ವರ್ಷ ಅಚಾನಕ್ಕಾಗಿ ಗುಡುಗು, ಮಿಂಚಿನ ಸಹಿತ ಮಳೆ ಬರಲಿದ್ದು, ಎರಡು-ಮೂರು ರಾಷ್ಟ್ರಗಳು ನೀರಿನಲ್ಲಿ ಮುಳುಗಲಿವೆ ಎಂದು ಕೋಡಿ ಮಠದ ಶ್ರೀ ಶಿವಾನಂದ ಶಿವಯೋಗಿ ಸ್ವಾಮೀಜಿ ಮತ್ತೊಂದು ಭವಿಷ್ಯ ನುಡಿದಿದ್ದಾರೆ.
ಕೋಲಾರ ತಾಲ್ಲೂಕಿನ ಸುಗಟೂರು ಗ್ರಾಮದ ಯೋಗಿ ನಾರಾಯಣ ಮಠಕ್ಕೆ ಭೇಟಿ ನೀಡಿದ ಬಳಿಕ ಮಾತನಾಡಿದ ಅವರು, ಈ ಹಿಂದೆ ಹೇಳಿದಂತೆ ರಾಜ್ಯದಲ್ಲಿ ಬಹುಮತದ ಸರ್ಕಾರ ಬಂದಿದೆ. ಈ ವರ್ಷದಲ್ಲಿ ದೊಡ್ಡ ಅವಘಡ ನಡೆಯುತ್ತೆ ಎಂದು ಹೇಳಿದ್ದೆ. ಅದರಂತೆ ರೈಲು ದುರಂತ ನಡೆದಿದೆ. ಇನ್ನೂ ಒಂದು ಗಂಡಾಂತರ ದೇಶಕ್ಕೆ ಕಾದಿದೆ ಎಂದು ಎಚ್ಚರಿಸಿದ್ದಾರೆ.
ಎಲ್ಲೋ ನಡೆದ ಬಾಂಬ್ ದಾಳಿಯಿಂದ ನಮಗೆ ಸಾಕಷ್ಟು ಅನಾಹುತ ಸಂಭವಿಸಲಿದೆ. ಮತ್ತೆ ಕೈವಾರ ತಾತಯ್ಯನವರು ಹುಟ್ಟಿ ಬರುವ ಸಂಕೇತ ಇದೆ. ಅಂತಹ ಸೂಚನೆ ಈಗಾಗಲೆ ಸಿಕ್ಕಿದೆ. ಅದರಂತೆ ಬೆಟ್ಟದಲ್ಲಿ ಮೂನ್ಸೂಚನೆ ಸಿಕ್ಕಿದೆ ಎಂದು ತಿಳಿಸಿದ್ದಾರೆ.