ಭಾರತದ ಮತ್ತೊಬ್ಬ ವಿದ್ಯಾರ್ಥಿಗೆ ಗುಂಡು!

ಶುಕ್ರವಾರ, 4 ಮಾರ್ಚ್ 2022 (09:32 IST)
ಕಳೆದ ಕೆಲವು ದಿನಗಳ ಹಿಂದೆ ರಷ್ಯಾದ ದಾಳಿಗೆ ಕರ್ನಾಟಕ ಮೂಲದ ವಿದ್ಯಾರ್ಥಿಯೋರ್ವ ಮೃತಪಟ್ಟಿದ್ದ.

ಈ ಘಟನೆಯ ಬೆನ್ನಲ್ಲೇ ಇಂದು ಮತ್ತೋರ್ವ ವಿದ್ಯಾರ್ಥಿಗೆ ಗುಂಡು ತಗುಲಿದೆ. ಸದ್ಯ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಈ ಕುರಿತು ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ರಾಜ್ಯ ಸಚಿವರಾಗಿರುವ ಜನರಲ್ (ನಿವೃತ್ತ) ವಿಕೆ ಸಿಂಗ್ ಮಾಹಿತಿ ನೀಡಿದ್ದಾರೆ. ಪೋಲಂಡ್ನಲ್ಲಿ ಅವರು ಎಎನ್ಐನೊಂದಿಗೆ ಮಾತನಾಡಿದರು. ‘ಕೀವ್ನಿಂದ ಬರುತ್ತಿದ್ದ ವಿದ್ಯಾರ್ಥಿಯೊಬ್ಬನಿಗೆ ಗುಂಡು ತಗುಲಿದ್ದು, ಆತ ಮಾರ್ಗ ಮಧ್ಯದಲ್ಲಿ ವಾಪಸ್ಸಾಗಿದ್ದಾರೆ. ಅವರನ್ನು ಕೀವ್ನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ’ ಎಂದು ವಿಕೆ ಸಿಂಗ್ ಹೇಳಿದ್ದಾರೆ.

‘ಭಾರತದ ರಾಯಭಾರ ಕಚೇರಿಯು ಈ ಹಿಂದೆ ಕೀವ್ ತೊರೆಯಬೇಕು ಎಂದು ತಿಳಿಸಿತ್ತು. ಯುದ್ಧದ ಸಂದರ್ಭದಲ್ಲಿ ಧರ್ಮ, ಜಾತೀಯತೆಯನ್ನು ನೋಡುವುದಿಲ್ಲ’ ಎಂದು ವಿಕೆ ಸಿಂಗ್ ಹೇಳಿದ್ದಾರೆ. ಪ್ರಸ್ತುತ ಉಕ್ರೇನ್ನಲ್ಲಿನ ವಿದ್ಯಾರ್ಥಿಗಳು ಗಡಿ ಪ್ರದೇಶಗಳತ್ತ ತೆರಳಲು ಯತ್ನಿಸುತ್ತಿದ್ದಾರೆ.

ನಾಲ್ವರು ಕೇಂದ್ರ ಸಚಿವರಾದ ಹರ್ದೀಪ್ ಸಿಂಗ್ ಪುರಿ, ಜ್ಯೋತಿರಾದಿತ್ಯ ಎಂ ಸಿಂಧಿಯಾ, ಕಿರಣ್ ರಿಜಿಜು ಮತ್ತು ಜನರಲ್ (ನಿವೃತ್ತ) ವಿಕೆ ಸಿಂಗ್ — ಉಕ್ರೇನ್ ಗಡಿ ದೇಶಗಳಲ್ಲಿ ಆಪರೇಷನ್ ಗಂಗಾದ ಜವಾಬ್ದಾರಿ ಹೊತ್ತಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ