ಕೇಂದ್ರದಿಂದ ದೇಶದ ಜನತೆಗೆ ಮತ್ತೊಂದು ಭರ್ಜರಿ ಸಿಹಿಸುದ್ದಿ

ಸೋಮವಾರ, 27 ಸೆಪ್ಟಂಬರ್ 2021 (13:54 IST)
ನವದೆಹಲಿ : ದೇಶದ ಜನತೆಗೆ ಕೇಂದ್ರ ಸರ್ಕಾರವು ಮತ್ತೊಂದು ಭರ್ಜರಿ ಸಿಹಿಸುದ್ದಿ ನೀಡಿದ್ದು, ದೇಶದ ಪ್ರತಿ ಪ್ರಜೆಗೂ ಅವರ ಆರೋಗ್ಯದ ಸಂಪೂರ್ಣ ಮಾಹಿತಿ ಒಳಗೊಂಡ ಡಿಜಿಟಲ್ ಕಾರ್ಡ್ ವಿತರಿಸುವ ಪ್ರಧಾನಿ ಮಂತ್ರಿ ಡಿಜಿಟಲ್ ಹೆಲ್ತ್ ಮಿಷನ್ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಇಂದು ಚಾಲನೆ ನೀಡಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆ 11 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಲಿದ್ದಾರೆ. ಈಗಾಗಲೇ ಪ್ರಾಯೋಗಿಕ ಹಂತದಲ್ಲಿ 6 ಕೇಂದ್ರಾಡಳಿತ ಪ್ರದೇಶಗಳಲ್ಲಿ ಯೋಜನೆ ಜಾರಿಯಲ್ಲಿದ್ದು, ದೇಶಾದ್ಯಂತ ವಿಸ್ತರಿಸಲಾಗುವುದು.. ದೇಶದ ಪ್ರತಿ ಪ್ರಜೆಗೂ ಗುಣಮಟ್ಟದ, ಸುಲಲಿತ, ಸಮಗ್ರ, ಅಗ್ಗದ ಮತ್ತು ಸುರಕ್ಷಿತ ಆರೋಗ್ಯ ಸೇವೆ ಒದಗಿಸುವ ಉದ್ದೇಶವನ್ನು ಈ ಯೋಜನೆ ಹೊಂದಿದೆ.
ಪ್ರಧಾನಮಂತ್ರಿ ಡಿಜಿಟಲ್ ಆರೋಗ್ಯ ಮಿಷನ್ ಯೋಜನೆಯಡಿ ದೇಶದ ಪ್ರತಿಯೊಬ್ಬರಿಗೂ ಆಧಾರ್ ಮತ್ತು ಮೊಬೈಲ್ ಸಂಖ್ಯೆ ರೀತಿ ವಿಶೇಷ ಗುರುತಿನ ಚೀಟಿ ವಿತರಿಸಲಾಗುತ್ತದೆ. ಈ ಗುರುತಿನ ಚೀಟಿಯು ವ್ಯಕ್ತಿಯೊಬ್ಬರ ಆರೋಗ್ಯ ಕುರಿತಾದ ಮಾಹಿತಿ ಒಳಗೊಂಡಿರಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ