ಶಾಲೆ, ಕಾಲೇಜುಗಳಲ್ಲಿ ಆತಂಕ ತಂದ ಸೋಂಕು!

ಸೋಮವಾರ, 6 ಡಿಸೆಂಬರ್ 2021 (12:54 IST)
ಬೆಂಗಳೂರು : ಕೊವಿಡ್ 19 ಬೇರೆಯದ್ದೇ ರೂಪದಲ್ಲಿ ಕಾಲಿರಿಸಿದ್ದು ಇಡೀ ಜಗತ್ತನ್ನು ಮತ್ತೆ ಆತಂಕದ ಮಡುವಿಗೆ ದೂಡಿದೆ.
ಈ ಮಧ್ಯೆ, ಕರ್ನಾಟಕ ರಾಜ್ಯದ ಕೆಲವು ಶಾಲೆ, ಕಾಲೇಜುಗಳಲ್ಲಿಯೂ ಕೋವಿಡ್ ಸೋಂಕು ಹೆಚ್ಚಳವಾಗುತ್ತಿದೆ. ಇದು ಸಹಜವಾಗಿಯೇ ಸರ್ಕಾರಕ್ಕೂ ಆತಂಕ ತಂದಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಅವರು ಕೆಲವು ಶಾಲೆ, ಕಾಲೇಜುಗಳಲ್ಲಿ ಕೋವಿಡ್ ಸೋಂಕು ಹೆಚ್ಚಳ ಆತಂಕ ತಂದಿದೆ ಎಂದು ಅಲಾರಂ ಬೆಲ್ ಹೊಡೆದಿದ್ದಾರೆ.
ವಿಧಾನಸೌಧದಲ್ಲಿ ಈ ಬಗ್ಗೆ ಮಾತನಾಡಿರುವ ಶಿಕ್ಷಣ ಸಚಿವ ನಾಗೇಶ್ ಸೋಂಕು ಹೆಚ್ಚಳ ಸ್ವಲ್ಪ ಆತಂಕ ತಂದಿದೆ. ಸೋಂಕು ಕಂಡುಬಂದಿರುವುದು ವಸತಿ ಶಾಲೆಗಳಲ್ಲಿ ಮತ್ತು ನವೋದಯ ಶಾಲೆಗಳಲ್ಲಿ ಎಂದಿದ್ದಾರೆ.
ಶಾಲಾ ಮಟ್ಟದಲ್ಲಿ 1 ರಿಂದ 10 ನೆ ತರಗತಿವರಗೆ ಸರ್ಕಾರಿ ಸರ್ಕಾರಿ ಶಾಲೆಗಳಲ್ಲಿ ಸೋಂಕಿಲ್ಲ. ವಸತಿ ಮತ್ತು ನವೋದಯ ಶಾಲೆಗಳಲ್ಲಿ ಸೋಂಕು ಹಿನ್ನೆಲೆ ಅಗತ್ಯ ಕ್ರಮ ತಗೆದುಕೊಳ್ಳುತೇವೆ. ಮಕ್ಕಳಿಗೆ ತೊಂದರೆ ಆಗಿಲ್ಲ, ಚಿಕಿತ್ಸೆ ಕೊಡಲಾಗಿದೆ. ಇಬ್ಬರು ಶಿಕ್ಷಕರಿಗೆ ಸೋಂಕು ಬಂದಿದೆ. ಯಾವುದೇ ಸಮಸ್ಯೆ, ಆತಂಕ ಇಲ್ಲ. ಇವತ್ತು ಅಧಿಕಾರಿಗಳ ಜತೆ ಚರ್ಚೆ ಮಾಡುತ್ತೇನೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ