ನವದೆಹಲಿ : 12 ರಿಂದ 17 ವರ್ಷದೊಳಗಿನ ಮಕ್ಕಳಿಗೆ ಭಾರತದ ಸೇರಂ ಇನ್ಸ್ಟಿಟ್ಯೂಟ್ ಸಿದ್ಧಪಡಿಸಿರುವ ಕೋವಿಡ್ ಲಸಿಕೆ ಕೋವೊವ್ಯಾಕ್ಸ್ ನೀಡಲು ರಾಷ್ಟ್ರೀಯ ತಾಂತ್ರಿಕ ಸಲಹಾ ಸಮಿತಿ ಅನುಮೋದನೆ ನೀಡಿದೆ ಎಂದು ಮೂಲಗಳಿಂದ ವರದಿಯಾಗಿದೆ.
ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್ ತಜ್ಞರು ಸೇರಂ ಇನ್ಸ್ಟಿಟ್ಯೂಟ್ ಸಿದ್ಧಪಡಿಸಿರುವ ಕೋವೊವ್ಯಾಕ್ಸ್ ಲಸಿಕೆಯನ್ನು ತುರ್ತು ಬಳಕೆಗೆ ಈ ಮೊದಲೇ ಅನುಮತಿ ನೀಡಿದ್ದರು. ಇದೀಗ ಎಲ್ಲಾ 12 ರಿಂದ 17 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ನೀಡಲು ಅನುಮತಿ ನೀಡಿರುವ ಬಗ್ಗೆ ಮೂಲಗಳಿಂದ ವರದಿಯಾಗಿದೆ.
ಕೋವೊವ್ಯಾಕ್ಸ್ ಲಸಿಕೆ 12 ವರ್ಷದಿಂದ ಮೇಲ್ಪಟ್ಟ ಮಕ್ಕಳಿಗೆ ನೀಡುವ ಕುರಿತಾಗಿ ಕೇಂದ್ರ ಆರೋಗ್ಯ ಇಲಾಖೆ ಚಿಂತನೆ ನಡೆಸಿತ್ತು. ಈಗಾಗಲೇ ಖಾಸಗಿ ಆಸ್ಪತ್ರೆಗಳಲ್ಲಿ 900 ರೂ. ಒಂದು ಡೋಸ್ ಲಸಿಕೆಗೆ ದರ ನಿಗದಿ ಪಡಿಸಲಾಗಿದೆ. ಆದರೆ ಸರ್ಕಾರದಿಂದ ಯಾವುದೇ ದರ ನಿಗದಿಯಾಗಿಲ್ಲ.