ಪಂಚಭೂತಗಳಲ್ಲಿ ವಿಲೀನರಾದ ಅಜಾತ ಶತ್ರು ವಾಜಪೇಯಿ

ಶುಕ್ರವಾರ, 17 ಆಗಸ್ಟ್ 2018 (16:59 IST)
ನವದೆಹಲಿ: ನಿನ್ನೆ ನಿಧನರಾದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅಂತಿಮ ಸಂಸ್ಕಾರ ಕಾರ್ಯಗಳು ಪೂರ್ಣಗೊಂಡಿವೆ.
 

ದೆಹಲಿಯ ರಾಷ್ಟ್ರೀಯ ಸ್ಮೃತಿ ಸ್ಮಾರಕದಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ವಾಜಪೇಯಿ ಅವರ ಅಂತ್ಯ ಸಂಸ್ಕಾರ ನೆರವೇರಿದೆ. ದತ್ತು ಪುತ್ರಿ ನಮಿತಾ ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು.

ಇದಕ್ಕೂ ಮೊದಲು ದೇಶ-ವಿದೇಶದ ಗಣ್ಯರು ಅಗಲಿದ ನಾಯಕನಿಗೆ ಅಂತಿಮ ನಮನ ಸಲ್ಲಿಸಿದರು. ಭೂತಾನ್ ದೊರೆ ಜಿಗ್ಮೆ ಕೇಸರ್, ಅಫ್ಘಾನಿಸ್ತಾನ ಮಾಜಿ ಅಧ್ಯಕ್ಷ ಹಮೀದ್ ಕರ್ಜಾಯಿ, ಪ್ರಧಾನಿ ಮೋದಿ, ರಾಷ್ಟ್ರಪತಿ ರಮಾನಾಥ್ ಕೋವಿಂದ್, ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಮೂರೂ ಸೇನಾ ನಾಯಕರು ಸೇರಿದಂತೆ ಗಣ್ಯರು ಅಂತಿಮ ನಮನ ಸಲ್ಲಿಸಿದರು.

ಅಂತ್ಯ ಸಂಸ್ಕಾರದ ವೇಳೆ ಸಾವಿರಾರು ಮಂದಿ ಪಾಲ್ಗೊಂಡಿದ್ದರು. ಕೊನೆಯ ಬಾರಿಗೊಮ್ಮೆ ಅಭಿಮಾನಿಗಳು ತಮ್ಮ ಮೆಚ್ಚಿನ ನಾಯಕನ ದರ್ಶನ ಮಾಡಿದರು. ಅಂತಿಮವಾಗಿ ಅಗ್ನಿಸ್ಪರ್ಶ ಮಾಡುವ ಮೂಲಕ ಅಂತ್ಯ ಸಂಸ್ಕಾರ ಕಾರ್ಯಕ್ರಮಗಳು ನೆರವೇರಿದವು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.      

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ