ಬಕ್ರೀದ್ ಆಚರಣೆ : ಸರ್ಕಾರದ ಮಾರ್ಗಸೂಚಿಯಲ್ಲೇನಿದೆ?

ಶುಕ್ರವಾರ, 8 ಜುಲೈ 2022 (07:07 IST)
ಬೆಂಗಳೂರು : ಮುಸ್ಲಿಂ ಬಾಂಧವರ ಮತ್ತೊಂದು ಪ್ರಮುಖ ಹಬ್ಬವಾದ ಬಕ್ರೀದ್ ಆಚರಣೆಗೆ (ಜು.10) ಸಿದ್ಧತೆ ನಡೆದಿದೆ.

ಹಬ್ಬ ಆಚರಣೆಗೆ ಸಂಬಂಧಿಸಿದಂತೆ ನಿಯಮಗಳನ್ನು ಪಾಲಿಸುವಂತೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.

ನಿಯಮಗಳೇನು?

ಹಬ್ಬದ ದಿನದ ಸಾಮೂಹಿಕ ಪ್ರಾರ್ಥನೆಯಲ್ಲಿ ಪ್ರಸ್ತುತ ಚಾಲ್ತಿಯಲ್ಲಿರುವ ಕೋವಿಡ್ ನಿಯಂತ್ರಣ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವುದು.

ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಾರ್ವತ್ರಿಕ ಅಧಿನಿಯಮ 2020ರ ನಿಯಮಗಳು ಉಲ್ಲಂಘನೆಯಾಗದಂತೆ ಖುರ್ಬಾನಿಯನ್ನು (ಪ್ರಾಣಿ ಬಲಿದಾನ) ನೆರವೇರಿಸುವುದು. 

ಖುರ್ಬಾನಿಯನ್ನು ಸಾರ್ವಜನಿಕ ಪ್ರದೇಶ, ರಸ್ತೆಗಳು, ಶಾಲಾ-ಕಾಲೇಜು, ಆಸ್ಪತ್ರೆ ಆವರಣ, ಉದ್ಯಾನ ಹಾಗೂ ಇತರೆ ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿಸಿದೆ.
ಜಿಲ್ಲಾಡಳಿತ/ಸ್ಥಳೀಯ ಆಡಳಿತ ಸಂಸ್ಥೆಗಳಿಂದ ನಿಗದಿಪಡಿಸಲಾದ ಸ್ಥಳಗಳಲ್ಲಿ ಮಾತ್ರ ಖುರ್ಬಾನಿಯನ್ನು ನೆರವೇರಿಸತಕ್ಕದ್ದು.
ಖುರ್ಬಾನಿ ನೆರವೇರಿಸುವಾಗ ಶುಚಿತ್ವ ಮತ್ತು ನೈರ್ಮಲ್ಯವನ್ನು ಕಡ್ಡಾಯವಾಗಿ ಕಾಪಾಡಿಕೊಳ್ಳುವುದು.
ಪ್ರಾಣಿ ತ್ಯಾಜ್ಯವನ್ನು ಪರಿಣಾಮಕಾರಿಯಾಗಿ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡುವುದು.
ಪೊಲೀಸ್ ಇಲಾಖೆ, ಪಶು ಪಾಲನಾ ಮತ್ತು ಪಶುವೈದ್ಯಸೇವಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯವರು ನೀಡುವ ಸಾಮಾನ್ಯ ಮತ್ತು ಸ್ಥಳೀಯವಾಗಿ ನೀಡುವ ನಿರ್ದೇಶನಗಳನ್ನು ಕಡ್ಡಾಯವಾಗಿ ಪಾಲಿಸತಕ್ಕದ್ದು.
ಹಬ್ಬದ ಆಚರಣೆ ಕುರಿತು ರಾಜ್ಯ ಸರ್ಕಾರ/ ಜಿಲ್ಲಾಡಳಿತ ಹೊರಡಿಸುವ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸತಕ್ಕದ್ದು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ