ಬೆಂಗಳೂರು ಬಂದ್ ; ಇಂದು ರಾಜ್ಯ ಸರ್ಕಾರದ ವಿರುದ್ಧ ಸಮರ

ಸೋಮವಾರ, 11 ಸೆಪ್ಟಂಬರ್ 2023 (07:59 IST)
ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಪಟ್ಟು ಹಿಡಿದಿರುವ ಖಾಸಗಿ ಸಾರಿಗೆ ಒಕ್ಕೂಟ ಬೆಂಗಳೂರು ಬಂದ್ಗೆ ಕರೆ ನೀಡಿದ್ದು ಮಧ್ಯರಾತ್ರಿಯಿಂದಲೇ ಬಂದ್ ಬಿಸಿ ಶುರುವಾಗಿದೆ.

ಆಟೋ, ಟ್ಯಾಕ್ಸಿ, ಗೂಡ್ಸ್, ಖಾಸಗಿ ಬಸ್ ಸೇರಿ ವಿವಿಧ ಮಾದರಿಯ ಖಾಸಗಿ ಸಾರಿಗೆಯ ವಾಹನಗಳು ರಸ್ತೆಗೆ ಇಳಿಯುತ್ತಿಲ್ಲ. ಇಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಯನ್ನು ಒಕ್ಕೂಟ ಆಯೋಜಿಸಿದೆ.

ಬಂದ್ ಯಶಸ್ಸಿಗಾಗಿ ಖಾಸಗಿ ಸಾರಿಗೆ ಒಕ್ಕೂಟ ಪಣತೊಟ್ಟಿದೆ. ಬೆಂಗಳೂರಿನ ಕಲಾಸಿಪಾಳ್ಯ ಖಾಸಗಿ ಬಸ್ ನಿಲ್ದಾಣದ ಒಂದರಲ್ಲೇ 250ಕ್ಕೂ ಹೆಚ್ಚು ಬಸ್ ಸ್ತಬ್ದವಾಗಲಿದೆ. ಕೇವಲ ಬೆಂಗಳೂರು ಮಾತ್ರವಲ್ಲದೇ ನೆರೆಯ ಜಿಲ್ಲೆಗಳ ಖಾಸಗಿ ಬಸ್ ಮಾಲೀಕರು ಬಂದ್ಗೆ ಬೆಂಬಲ ಸೂಚಿಸಿದ್ದಾರೆ. ಇದರ ಪರಿಣಾಮ ಬೆಂಗಳೂರು ಜನಜೀವನದ ಮೇಲೆ ಸ್ವಲ್ಪ ಮಟ್ಟಿಗೆ ಬೀರುವ ಸಂಭವ ಇದೆ.  

ಖಾಸಗಿ ಸಮರ ಎದುರಿಸಲು ಸರ್ಕಾರ ಸಿದ್ಧತೆ ಮಾಡಿಕೊಂಡಿದ್ದು, ಸರ್ವಾಜನಿಕರಿಗೆ ಯಾವುದೇ ಸಮಸ್ಯೆ ಆಗದೇ ಇರಲು ಹೆಚ್ಚುವರಿ ಬಸ್ಗಳನ್ನು ರಸ್ತೆಗಿಳಿಸಲು ಇಲಾಖೆ ಪ್ಲಾನ್ ಮಾಡಿದೆ. ಬಂದ್ನಿಂದ ಜನರಿಗೆ ತೊಂದರೆ ಆಗುವುದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.
ಪ್ರಮುಖ ಬೇಡಿಕೆಗಳೇನು?
– ಖಾಸಗಿ ಬಸ್ಗಳನ್ನ ಶಕ್ತಿಯೋಜನೆ ವ್ಯಾಪ್ತಿಗೆ ತರಬೇಕು
– 3.64 ಲಕ್ಷ ಆಟೋ ಚಾಲಕರಿಗೆ ಮಾಸಿಕ 10 ಸಾವಿರ ನೀಡಬೇಕು
– ರ್ಯಾಪಿಡೋ ಬೈಕ್ ಟ್ಯಾಕ್ಸಿ ನಿಷೇಧ ಮಾಡಬೇಕು
– 10-15 ಲಕ್ಷ ಮೌಲ್ಯದ ವಾಹನಗಳಿಗೆ ಜೀವಿತಾವಧಿ ತೆರಿಗೆ ಬದಲು ಈ ಹಿಂದಿನ ನಿಯಮವೇ ಜಾರಿಗೆ ತರಬೇಕು
– ಏರ್ಪೋರ್ಟ್ ಟ್ಯಾಕ್ಸಿಗಳಿಗೆ ಒಂದೇ ದರ ನಿಗದಿ ಮಾಡಬೇಕು
– ಅಸಂಘಟಿತ ವಾಣಿಜ್ಯ ಚಾಲಕರ ಸಾರಿಗೆ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಬೇಕು
– ಚಾಲಕರಿಗೆ ವಸತಿ ಯೋಜನೆ ನೀಡಬೇಕು

ಏನೆಲ್ಲಾ ಇರಲ್ಲ?
ಆಟೋ, ಖಾಸಗಿ ಟ್ಯಾಕ್ಸಿ, ಏರ್ಪೋರ್ಟ್ ಟ್ಯಾಕ್ಸಿ, ಶಾಲೆಗಳ ಖಾಸಗಿ ವಾಹನ, ಖಾಸಗಿ ಬಸ್, ಗೂಡ್ಸ್ ವಾಹನ

ಏನೆಲ್ಲಾ ಇರುತ್ತೆ?
ಬಿಎಂಟಿಸಿ, ಕೆಎಸ್ಆರ್ಟಿಸಿ, ಸರ್ಕಾರಿ ಟ್ಯಾಕ್ಸಿ (ಕೆಎಸ್ಟಿಡಿಸಿ), ರೈಲು, ಖಾಸಗಿ ಶಾಲೆ, ಚಿತ್ರರಂಗದ ಚಟುವಟಿಕೆ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ