ಬೆಂಗಳೂರಿಗರೇ… ಗಮನಿಸಿ

ಭಾನುವಾರ, 23 ಜನವರಿ 2022 (06:39 IST)
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಪಾಸಿಟವ್ ಪ್ರಕರಣಗಳ ಸಂಖ್ಯೆ ಏರಿಳಿತ ಮುಂದುವರಿದಿದೆ.
 
ಇಂದು ಒಟ್ಟು 42,470 ಕೇಸ್ ದಾಖಲಾಗಿದ್ದು, 26 ಮರಣ ಪ್ರಕರಣ ಪತ್ತೆಯಾಗಿದೆ. ಬೆಂಗಳೂರಿನಲ್ಲಿ 30 ಸಾವಿರ ಗಡಿದಾಟಿದ್ದ ಪಾಸಿಟಿವ್ ಕೇಸ್ಗಳ ಸಂಖ್ಯೆ ದಿಢೀರ್ ಆಗಿ 17,266ಕ್ಕೆ ಇಳಿಕೆ ಕಂಡಿದೆ.

ರಾಜ್ಯದಲ್ಲಿ ಇಂದು ಒಟ್ಟು 35,140 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ರಾಜ್ಯದಲ್ಲಿ ಒಟ್ಟು 34,67,472 ಮಂದಿಗೆ ಕೊರೊನಾ ಬಂದಿದೆ. 30,98,432 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಪಾಸಿಟಿವಿಟಿ ರೇಟ್ ಶೇ.19.33 ರಷ್ಟಿದ್ದರೇ, ಕೋವಿಡ್-19 ಮರಣ ಪ್ರಮಾಣ ಶೇ.0.06 ರಷ್ಟಿದೆ.

ಬೆಂಗಳೂರಿನಲ್ಲಿ ಒಟ್ಟು 17,266 ಪಾಸಿಟಿವ್ ಕೇಸ್ ದಾಖಲಾಗಿದ್ದು, 443 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. 6 ಮರಣ ಪ್ರಕರಣ ದಾಖಲಾಗಿದೆ.  ರಾಜ್ಯದಲ್ಲಿ ಇಂದು ಒಟ್ಟು 1,79,816 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 2,19,699 ಸ್ಯಾಂಪಲ್ (ಆರ್ಟಿಪಿಸಿಆರ್ 1,70,637 + 49,062 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ