ನ್ಯೂ ಇಯರ್ಗೆ ಉತ್ತರ ಕನ್ನಡ ಜಿಲ್ಲೆಯ ಬೀಚ್ಗಳು ಬಂದ್ ಆಗಲಿದೆ. ಬೀಚ್ಗಳಿಗೆ ನಿರ್ಬಂಧ ವಿಧಿಸಿದ ಉತ್ತರ ಕನ್ನಡ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಡಿಸೆಂಬರ್ 31ರ ರಾತ್ರಿ 8 ರಿಂದ ಜನವರಿ 1ರ ಮುಂಜಾನೆ 5ರ ವರೆಗೆ ನಿಷೇಧಾಜ್ಞೆ ಇರಲಿದೆ.
ಜಿಲ್ಲೆಯ ಬೀಚ್ಗಳಲ್ಲಿ ಗುಂಪುಗೂಡಿ ಸೆಲೆಬ್ರೇಷನ್ಗೆ ನಿರ್ಬಂಧ ವಿಧಿಸಲಾಗಿದೆ. ಕೊರೊನಾ, ಒಮಿಕ್ರಾನ್ ಆತಂಕದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳದ ಸಮುದ್ರ ತೀರದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಆದೇಶ ಉಲ್ಲಂಘಿಸುವವರ ವಿರುದ್ಧ ಎನ್ಡಿಎಂಎ ಅಡಿ ಕೇಸ್ ದಾಖಲು ಮಾಡಲಾಗುವುದು. ಕೊರೊನಾ ಮಾರ್ಗಸೂಚಿ ಪಾಲಿಸುವಂತೆ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.
ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನಲ್ಲಿರುವ ಸುಮಾರು 80ಕ್ಕೂ ಹೆಚ್ಚು ಅನಧಿಕೃತ ರೆಸಾರ್ಟ್‌ಗಳಿಗೆ ಬೀಗ ಹಾಕಲಾಗಿದೆ. ಸಂಗಾಪುರ, ಸಣಾಪುರ, ಮಲ್ಲಾಪುರ ಬಳಿಯ ರೆಸಾರ್ಟ್‌ಗಳಿಗೆ ಬೀಗ ಹಾಕಲಾಗಿದೆ.