ರಾಜ್ಯದ ಕೆಲವು ಶಾಲಾ ಕಾಲೇಜುಗಳಲ್ಲಿ ಕೋವಿಡ್ ಪ್ರಕರಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಪೋಷಕರು ಚಿಂತಿತರಾಗಿದ್ದಾರೆ.
ಈ ನಿಟ್ಟಿನಲ್ಲಿ ಶಾಲೆಗಳಲ್ಲಿ ಮತ್ತೆ ಆನ್ಲೈನ್ ತರಗತಿಗಳನ್ನು ನಡೆಸುವಂತೆ ಒತ್ತಡವೂ ಹೆಚ್ಚಾಗುತ್ತಿದೆ. ಈ ನಡುವೆ ಅಗತ್ಯ ಬಿದ್ದರೆ ಶಾಲೆ ಬಂದ್ ಮಾಡಲು ಸಿದ್ಧ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದರು. ಆದರೆ ಇದೀಗ ಶಾಲೆ ಬಂದ್ ಮಾಡುವ ಆಲೋಚನೆ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಆನ್ಲೈನ್ ತರಗತಿಯಿಂದ ಪರಿಣಾಮಕಾರಿ ಶಿಕ್ಷಣಕ್ಕೆ ತೊಡಕಾಗುತ್ತಿರುವುದರಿಂದ ಶಾಲೆಯಲ್ಲಿ ಭೌತಿಕ ತರಗತಿಗಳಿಗೆ ಒತ್ತು ನೀಡಲಾಗುವುದು ಎಂದು ತಿಳಿಸಿದ್ದಾರೆ.