ಬೆಂಗಳೂರು, ಸೆ 26 : ಕೃಷಿ ಕಾಯ್ದೆಗಳನ್ನು ವಿರೋಧಿಸಿ ಸಂಯುಕ್ತ ಕಿಸಾನ್ ಮೋರ್ಚಾ ಸೋಮವಾರ ಭಾರತ್ ಬಂದ್ ಗೆ ಕರೆ ನೀಡಿದೆ. ಬೆಂಗಳೂರಿನಲ್ಲಿ ಸಹ ಬಂದ್ಗೆ ಬೆಂಬಲಿಸಿ ಬೃಹತ್ ಜಾಥಾ ನಡೆಸಲಾಗುತ್ತದೆ. ಇದರಿಂದಾಗಿ ವಾಹನ ಸಂಚಾರಕ್ಕೆ ತೊಂದರೆ ಉಂಟಾಗುವ ನಿರೀಕ್ಷೆ ಇದೆ.
ಬೆಂಗಳೂರು ಸಂಚಾರಿ ಪೊಲೀಸರು ಸೆಪ್ಟೆಂಬರ್ 27ರಂದು ರೈತರು ಜಾಥಾ ಹಮ್ಮಿಕೊಂಡಿರುವುದರಿಂದ ಸಂಚಾರ ವ್ಯವಸ್ಥೆಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಿದ್ದಾರೆ. ಮೆಜೆಸ್ಟಿಕ್, ಆನಂದ್ ರಾವ್ ವೃತ್ತ, ಫ್ರೀಡಂ ಪಾರ್ಕ್ ಸುತ್ತಮುತ್ತ ಸಂಚಾರ ನಡೆಸುವುದನ್ನು ವಾಹನ ಸವಾರರು ಸಂಚಾರ ಮಾರ್ಗ ಬದಲಾವಣೆ ಬಗ್ಗೆ ಮಾಹಿತಿ ತಿಳಿಯುವುದು ಅಗತ್ಯವಾಗಿದೆ.
ಕೆ. ಜಿ. ರಸ್ತೆಯಲ್ಲಿ ಹಲಸೂರು ಪೊಲೀಸ್ ಠಾಣೆ ಕಡೆಯಿಂದ ಬಂದು ಪೊಲೀಸ್ ಕಾರ್ನರ್ ಬಳಿ ಎಡ ತಿರುವು ಪಡೆದುಕೊಂಡು ಕೆ. ಜಿ. ರಸ್ತೆ ಕಡೆಗೆ ಸಾಗುವ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.
ಹಾಗೆಯೇ ನೃಪತುಂಗ ರಸ್ತೆ ಮೂಲಕ ಬಂದು ಪೊಲೀಸ್ ಕಾರ್ನರ್ ಬಳಿ ಬಲ ತಿರುವು ಪಡೆದು ಕೆ. ಜಿ. ರಸ್ತೆ ಸಾಗುವ ಸಂಚಾರವನ್ನು ನಿಷೇಧಿಸಲಾಗಿದೆ ಎಂದು ಬೆಂಗಳೂರು ಸಂಚಾರಿ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪರ್ಯಾಯ ವ್ಯವಸ್ಥೆ; ಹಲಸೂರು ಗೇಟ್ ಪೊಲೀಸ್ ಠಾಣೆ ಕಡೆಯಿಂದ ಬಂದು ಪೊಲೀಸ್ ಕಾರ್ನರ್ ಬಳಿ ಎಡ ತಿರುವು ಪಡೆದುಕೊಂಡು ಕೆ. ಜಿ. ರಸ್ತೆ ಕಡೆಗೆ ಸಾಗುವ ವಾಹನಗಳು ಪೊಲೀಸ್ ಕಾರ್ನರ್ ವೃತ್ತದಿಂದ ನೇರವಾಗಿ ನೃಪತುಂಗ ರಸ್ತೆಗೆ ಪವೇಶ ತೆಗೆದುಕೊಂಡು ನೃಪತುಂಗ ರಸ್ತೆಯಲ್ಲಿ ಸಾಗಿ ಕೆ. ಆರ್. ವೃತ್ತ ತಲುಪಿ ಮುಂದುವರೆಯಲು ಅನುವು ಮಾಡಿಕೊಡಲಾಗಿದೆ.