ರಾಜ್ಯ ಸರ್ಕಾರದಿಂದ ಅನರ್ಹ ಪಡಿತರ ಚೀಟಿದಾರರಿಗೆ ಬಿಗ್ ಶಾಕ್!

ಭಾನುವಾರ, 12 ಸೆಪ್ಟಂಬರ್ 2021 (13:36 IST)
ಬೆಂಗಳೂರು :  ಅನರ್ಹ ಪಡಿತರ ಚೀಟಿದಾರರಿಗೆ ಆಹಾರ ಇಲಾಖೆ ಬಿಗ್ ಶಾಕ್ ನೀಡಿದ್ದು, ತೆರಿಗೆ ಪಾವತಿದಾರರಾಗಿದ್ದರೂ ಸುಳ್ಳು ದಾಖಲೆ ನೀಡಿ ಬಿಪಿಎಲ್ ಮತ್ತು ಅಂತ್ಯೋದಯ ಪಡಿತರ ಚೀಟಿ ಪಡೆದಿದ್ದ 1.72 ಲಕ್ಷ ಪಡಿತರ ಚೀಟಿಗಳನ್ನು ಆಹಾರ ಇಲಾಖೆ ರದ್ದು ಮಾಡಿದೆ.

ಆಹಾರ ಇಲಾಖೆಯು 2021 ರ ಜನವರಿ 1 ರಿಂದ ಸೆ. 1 ರವರೆಗೆ 1,69,400 ಬಿಪಿಎಲ್ ಕಾರ್ಡ್ ಗಳು, 3080 ಅಂತ್ಯೋದಯ ಪಡಿತರ ಚೀಟಿ ಸೇರಿದಂತೆ ಒಟ್ಟು 1,72,480 ಪಡಿತರಚೀಟಿ ರದ್ದು ಮಾಡಲಾಗಿದೆ. ಜೊತೆಗೆ 7.40 ಲಕ್ಷ ಫಲಾನುಭವಿಗಳನ್ನು ಅನ್ನಭಾಗ್ಯ ಯೋಜನೆಯಿಂದ ಕೈಬಿಟ್ಟಿದೆ. ಇದರಿಂದಾಗಿ ರಾಜ್ಯ ಸರ್ಕಾರಕ್ಕೆ ಪ್ರತಿ ವರ್ಷ 107 ಕೋಟಿ ರೂ. ಉಳಿತಾಯವಾಗಲಿದೆ ಎಂದು ಆಹಾರ ಮತ್ತು ನಾಗರಿಕ ಇಲಾಖೆ ತಿಳಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ