ಇಂದಿನಿಂದ ಎಕ್ಸ್ಪ್ರೆಸ್ ವೇನಲ್ಲಿ ಬೈಕ್, ಆಟೋ ಸಂಚಾರಕ್ಕೆ ನಿರ್ಬಂಧ !

ಮಂಗಳವಾರ, 1 ಆಗಸ್ಟ್ 2023 (08:39 IST)
ರಾಮನಗರ : ದಶಪಥ ಹೆದ್ದಾರಿಯಲ್ಲಿ ಅಪಘಾತ ಪ್ರಕರಣಗಳಿಗೆ ಕಡಿವಾಣ ಹಾಕಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮುಂದಾಗಿದೆ. ಇಂದಿನಿಂದ ಎಕ್ಸ್ಪ್ರೆಸ್ ಹೈವೇನಲ್ಲಿ ದ್ವಿಚಕ್ರ, ತ್ರಿಚಕ್ರ ವಾಹನ ಸೇರಿ ಕೆಲ ವಾಹನಗಳಿಗೆ ನಿರ್ಬಂಧ ವಿಧಿಸಲಾಗಿದೆ.
 
ಬೈಕ್, ಆಟೋ, ಟ್ರ್ಯಾಕ್ಟರ್ಗಳು ಇಂದಿನಿಂದ ಸರ್ವೀಸ್ ರಸ್ತೆಯಲ್ಲೇ ಸಂಚರಿಸಲು ಅವಕಾಶ ಕಲ್ಪಿಸಿದ್ದು, ನಿಯಮ ಉಲ್ಲಂಘಿಸಿದ್ರೆ ದುಬಾರಿ ದಂಡ ಬೀಳಲಿದೆ.

ದಶಪಥ ಹೆದ್ದಾರಿಯಲ್ಲಿ ಅಪಘಾತ ಕೇಸ್ಗಳು ಕಡಿಮೆ ಮಾಡಲು ಹೆದ್ದಾರಿ ಪ್ರಾಧಿಕಾರ ಹೊಸ ರೂಲ್ಸ್ ಜಾರಿ ಮಾಡಿದೆ. ಇಂದಿನಿಂದ ದಶಪಥ ಹೆದ್ದಾರಿಯಲ್ಲಿ ದ್ವಿಚಕ್ರ, ತ್ರಿಚಕ್ರ ವಾಹನ ಸೇರಿ ಕೆಲ ವಾಹನಗಳಿಗೆ ನಿರ್ಬಂಧಿಸಲಾಗಿದೆ. ಬೈಕ್ ಹಾಗೂ ಮೂರು ಚಕ್ರದ ವಾಹನಗಳಿಂದ ಅಪಘಾತ ಸಂಖ್ಯೆ ಹೆಚ್ಚಳವಾಗಿರುವ ಕುರಿತು ವರದಿ ಸಂಗ್ರಹಿಸಿರೋ ಹೆದ್ದಾರಿ ಪ್ರಾಧಿಕಾರ ಈ ನಿರ್ಧಾರ ಕೈಗೊಂಡಿದೆ. 

ಯಾವ್ಯಾವ ವಾಹನಗಳಿಗೆ ನಿರ್ಬಂಧ?

* ಮೋಟಾರ್ ಸೈಕಲ್ – ಸ್ಕೂಟರ್ ಮತ್ತು ಇತರೆ ದ್ವಿಚಕ್ರ ವಾಹನ
* ತ್ರಿಚಕ್ರ ವಾಹನ – ಆಟೋ, ಇ-ಕಾರ್ಟ್ ವಾಹನಗಳು
* ಮೋಟಾರು ರಹಿತ ವಾಹನಗಳು, ಸೈಕಲ್ಗಳು
* ಟ್ರ್ಯಾಕ್ಟರ್ಗಳು, ಮಲ್ಟಿ ಆಕ್ಸೆಲ್ ಹೈಡ್ರಾಲಿಕ್ ವಾಹನಗಳು

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ