ದೇಶದ ಲೂಟಿಕೋರರೆಲ್ಲಾ ಇಂದು ಬೆಂಗಳೂರಿಗೆ ಬರ್ತಿದ್ದಾರೆ: ಬಸನಗೌಡ ಪಾಟೀಲ್ ಯತ್ನಾಳ್

ಬುಧವಾರ, 23 ಮೇ 2018 (09:04 IST)
ಬೆಂಗಳೂರು: ಇಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಪ್ರಮಾಣ ವಚನ ಸಮಾರಂಭಕ್ಕೆ ದೇಶದ ಹಲವು ಬಿಜೆಪಿ ವಿರೋಧಿ ಪಕ್ಷಗಳ ನಾಯಕರು ಆಗಮಿಸುತ್ತಿರುವುದಕ್ಕೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಲೇವಡಿ ಮಾಡಿದ್ದಾರೆ.

‘ದೇಶದ ಕಳ್ಳರು, ದರೋಡೆಕೋರರು, ಭ್ರಷ್ಟರು ಎಲ್ಲರೂ ಇಂದು ಬೆಂಗಳೂರಿಗೆ ಬರುತ್ತಿದ್ದಾರೆ’ ಎಂದು ಬಸನಗೌಡ ಪಾಟೀಲ್ ವ್ಯಂಗ್ಯವಾಗಿ ಹೇಳಿದ್ದಾರೆ. ಸಿಎಂ ಪ್ರಮಾಣ ವಚನ ಸಮಾರಂಭಕ್ಕೆ ದೆಹಲಿ ಸಿಎಂ ಕೇಜ್ರಿವಾಲ್, ಆರ್ ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಪುತ್ರರು, ಉತ್ತರ ಪ್ರದೇಶ ಮಾಜಿ ಸಿಎಂ ಅಖಿಲೇಶ್ ಯಾದವ್, ಪ.ಬಂಗಾಲ ಸಿಎಂ ಮಮತಾ ಬ್ಯಾನರ್ಜಿ ಮುಂತಾದವರು ಆಗಮಿಸಲಿದ್ದಾರೆ.

ನಿನ್ನೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್ ಈ ಎಲ್ಲಾ ನಾಯಕರನ್ನು ಲೂಟಿಕೋರರು ಎಂದು ವ್ಯಂಗ್ಯವಾಗಿ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ