ದೇಶದಲ್ಲಿಯೇ ಅತ್ಯಂತ ಹೆಚ್ಚು ಭ್ರಷ್ಟಾಚಾರ ನಡೆದಿರೋದು ಕರ್ನಾಟಕದಲ್ಲಿ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಗುಡುಗಿದ್ರು. ಕಾಂಗ್ರೆಸ್ ಪಕ್ಷ ಕರ್ನಾಟಕದಲ್ಲಿ ಕಳೆದ ಐದು ವರ್ಗಗಳಿಂದ ಆಡಳಿತ ನಡೆಸುತ್ತಿದೆ. ಆದ್ರೆ ಜನಪರವಾದ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದು ಮಾತ್ರ ಶೂನ್ಯ. ಹೀಗಾಗಿ ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದ್ರು.
ಇನ್ನು ಸಿಎಂ ಸಿದ್ದರಾಮಯ್ಯ ಎರಡು ಕಡೆಗಳಲ್ಲಿ ಸ್ಪರ್ಧೆ ಮಾಡುವ ವಿಚಾರ ಪ್ರಸ್ತಾಪಿಸಿದ ನರಸಿಂಹರಾವ್, ರಾಜ್ಯದ ಮುಖ್ಯಮಂತ್ರಿಯಾಗಿ ತಮ್ಮ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸ ಮಾಡಿದ್ದೇ ಆದ್ರೆ ತಮ್ಮ ಜಾತಿ ಜನ ಹೆಚ್ಚಿಗೆ ಇದ್ದಾರೆ ಎನ್ನುವ ಕಾರಣಕ್ಕೆ ಬಾದಾಮಿ ವಿಧಾನಸಭೆ ಕ್ಷೇತ್ರಕ್ಕೆ ಹೋಗಿದ್ದು ಎಷ್ಟು ಸರಿ ಎಂದು ಪ್ರಶ್ನೆ ಮಾಡಿದ್ರು.