ಬಂದ್ ಮಾಡುತ್ತೇವೆ ಎಂದು ಹೇಳುವ ಮೂಲಕ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದಾರೆ- ಡಿ.ಕೆ.ಶಿವಕುಮಾರ್

ಶನಿವಾರ, 26 ಮೇ 2018 (07:08 IST)
ಬೆಂಗಳೂರು : ನೂತನ ಸರ್ಕಾರ ರೈತರ ಸಾಲಮನ್ನಾ ಮಾಡದಿದ್ದರೆ ಕರ್ನಾಟಕ ಬಂದ್ ಮಾಡುವುದಾಗಿ ಹೇಳಿ ಕಲಾಪದ ವೇಳೆ ಸದಸದಿಂದ ಹೊರನಡೆದ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.


ವಿಧಾನ ಸೌಧದಲ್ಲಿ ಮಾತನಾಡಿದ ಅವರು, ಸಾಲ ಮನ್ನಾ ವಿಚಾರವಾಗಿ ಬಿಜೆಪಿ ಡೆಡ್‌ಲೈನ್ ಕೊಡಲು ಸಾಧ್ಯವಿಲ್ಲ. ಬಹುಮತ ಸಾಬೀತು ವೇಳೆ ವಾಕ್ ಔಟ್ ಮಾಡುವ ಮೂಲಕ ಬಿಜೆಪಿ ಪ್ರಜಾಪ್ರಭುತ್ವಕ್ಕೆ ಅಪಮಾನ ಮಾಡಿದ್ದಾರೆ ಎಂದು  ಆರೋಪಿಸಿದ್ದಾರೆ.
ರೈತರು ಶಾಂತಿಯುತವಾಗಿ ವರ್ತಿಸಬೇಕು. ಯಡಿಯೂರಪ್ಪಗೆ ಸಿಎಂ ಆಗಲು ಅಡ್ಡಿಯಾಗಿದ್ದು, ಕಾಂಗ್ರೆಸ್ ಶಕ್ತಿ. ನನ್ನಿಂದ ಮಾತ್ರ ಅದು ಆಗಿಲ್ಲವೆಂದು ಸ್ಪಷ್ಟಪಡಿಸಿದ ಯಡಿಯೂರಪ್ಪ ಅವರು ಇಂದು ಕೆಟ್ಟ ಸಂಸದೀಯ ವ್ಯವಹಾರವನ್ನು ಶುರು ಮಾಡಿದ್ದಾರೆ. ಬಂದ್ ಮಾಡುತ್ತೇವೆ ಎಂದು ಹೇಳುವ ಮೂಲಕ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದಾರೆ. ಅವರು ಹೇಳಿದಂತೆ ಸರ್ಕಾರ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಡಿ ಕೆ ಶಿವಕುಮಾರ್‌ ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ