ಬೊಮ್ಮಾಯಿ ಸರ್ಕಾರದ ಕೊನೆಯ ಬಜೆಟ್ ಮಂಡನೆ

ಶುಕ್ರವಾರ, 17 ಫೆಬ್ರವರಿ 2023 (09:01 IST)
ಬೆಂಗಳೂರು : ಚುನಾವಣೆ ಸನಿಹದಲ್ಲಿ ರಾಜ್ಯ ಬಿಜೆಪಿ ಸರ್ಕಾರದ ಕೊನೆಯ ಬಜೆಟ್ ಶುಕ್ರವಾರ ಮಂಡನೆಯಾಗಲಿದೆ. ವಿಧಾನಸಭೆಯಲ್ಲಿ ನಾಳೆ ಬೆಳಗ್ಗೆ 10:15ಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಎರಡನೇ ಬಜೆಟ್ ಮಂಡಿಸಲಿದ್ದಾರೆ.

ತೆರಿಗೆ ಸಂಗ್ರಹದಲ್ಲಿ ನಿಗದಿತ ಗುರಿಗಿಂತ ಹೆಚ್ಚು ಸಂಗ್ರಹವಾಗಿದೆ. ಹೀಗಾಗಿ ಬಜೆಟ್ ಗಾತ್ರ ಇದೇ ಮೊದಲ ಬಾರಿಗೆ 3 ಲಕ್ಷ ಕೋಟಿ ದಾಟುವ ಸಾಧ್ಯತೆ ಇದೆ.

ಚುನಾವಣೆ ಸನಿಹದಲ್ಲಿ ಇರುವುದರಿಂದ ಈ ಬಜೆಟ್ ಸಹಜವಾಗಿಯೇ ಜನಪ್ರಿಯತೆಯ ಹಳಿ ಮೇಲೆ ಸಾಗುವ ನಿರೀಕ್ಷೆ ಇದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ