ಬೂಸ್ಟರ್ ಡೋಸ್ ಅಂತರ ಇಳಿಕೆ ?

ಶುಕ್ರವಾರ, 29 ಏಪ್ರಿಲ್ 2022 (11:46 IST)
ನವದೆಹಲಿ : ಕೊರೋನಾ ಲಸಿಕೆಯ ಎರಡನೇ ಡೋಸ್ ಮತ್ತು ಮುಂಜಾಗ್ರತಾ ಡೋಸ್ ನಡುವಿನ ಅಂತರವನ್ನು ಸರ್ಕಾರ ಶೀಘ್ರವೇ 6 ತಿಂಗಳಿಗೆ ಇಳಿಸುವ ಸಾಧ್ಯತೆ ಇದೆ ಎಂದು ಅಧಿಕೃತ ಮೂಲಗಳು ಬುಧವಾರ ತಿಳಿಸಿವೆ.
 
ಸದ್ಯ ಈ ಡೋಸ್ಗಳ ನಡುವೆ 9 ತಿಂಗಳ ಅಂತರ ಇದೆ. ಲಸಿಕೆ ಕುರಿತ ರಾಷ್ಟ್ರೀಯ ತಾಂತ್ರಿಕ ಸಲಹಾ ಗುಂಪು ಏ.29ರಂದು ನಿಗದಿಯಾಗಿರುವ ಸಭೆಯಲ್ಲಿ ಲಸಿಕೆ ನಡುವಿನ ಅಂತರವನ್ನು ತಗ್ಗಿಸುವ ಬಗ್ಗೆ ಶಿಫಾರಸು ಮಾಡಲಿದೆ ಎಂದು ತಿಳಿಸಿದ್ದಾರೆ.

2 ಡೋಸ್ ಪಡೆದ 6 ತಿಂಗಳ ನಂತರ ಮನುಷ್ಯನ ದೇಹದಲ್ಲಿ ಪ್ರತಿರೋಧ ಶಕ್ತಿ ಕುಗ್ಗುತ್ತದೆ. ಹೀಗಾಗಿ ಬೂಸ್ಟರ್ ಡೋಸ್ ನೀಡಬೇಕು ಎಂದು ಐಸಿಎಂಆರ್ ಮತ್ತು ಇತರ ಅಂತಾರಾಷ್ಟ್ರೀಯ ಸಂಶೋಧನಾ ಸಂಸ್ಥೆಗಳು ಸಲಹೆ ನೀಡಿದ್ದವು.

ಈ ಎಲ್ಲಾ ವೈಜ್ಞಾನಿಕ ಸಂಶೋಧನೆಗಳ ಆಧಾರದಲ್ಲಿ ಎರಡನೇ ಡೋಸ್ ಮತ್ತು ಮುನ್ನೆಚ್ಚರಿಕಾ ಡೋಸ್ ನಡುವಿನ ಅಂತರವನ್ನು 6 ತಿಂಗಳಿಗೆ ತಗ್ಗಿಸಲು ಸರ್ಕಾರ ಚಿಂತನೆ ನಡೆಸಿದೆ. ಶೀಘ್ರವೇ ಈ ಬಗ್ಗೆ ಅಧಿಕೃತ ಆದೇಶ ಹೊರಡಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ