ಬ್ರೇಕಿಂಗ್! ಬಿಜೆಪಿಗೆ ಸರ್ಕಾರ ರಚಿಸಲು ಆಹ್ವಾನ! ನಾಳೆ ಬೆಳಿಗ್ಗೆ ಬಿಎಸ್ ವೈ ಪ್ರಮಾಣವಚನ!

ಬುಧವಾರ, 16 ಮೇ 2018 (21:38 IST)
ಬೆಂಗಳೂರು: ನಾಳೆ ಬಿಜೆಪಿ ರಾಜ್ಯಾದ್ಯಕ್ಷ ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ರಾತ್ರಿ ದಿಡೀರ್ ಸುದ್ದಿಗೋಷ್ಠಿ ನಡೆಸಿದ ಬಸವರಾಜ ಬೊಮ್ಮಾಯಿ ಮತ್ತು ಇತರ ಬಿಜೆಪಿ ನಾಯಕರು ಈ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ರಾಜಭವನದಿಂದ ಸಂದೇಶ ಬಂದಿದೆ ಎಂದು ಬೊಮ್ಮಾಯಿ ಹೇಳಿದ್ದಾರೆ.

ರಾಜ್ಯಪಾಲರಿಂದ ಅಧಿಕೃತ ಆಹ್ವಾನ ಬಂದ ಹಿನ್ನಲೆಯಲ್ಲಿ ನಾಳೆ ಯಡಿಯೂರಪ್ಪ ಮೂರನೇ ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ವಿಶ್ವಾಸಮತ ಯಾಚನೆಗೆ 15 ದಿನಗಳ ಸಮಯಾವಕಾಶವನ್ನು ರಾಜ್ಯಪಾಲ ವಜುಬಾಯಿವಾಲಾ ನೀಡಿದ್ದಾರೆ ಎಂದು ಬಿಜೆಪಿ ಚುನಾವಣಾ ಉಸ್ತುವಾರಿ ಮುರಳೀಧರ್ ರಾವ್ ತಿಳಿಸಿದ್ದಾರೆ.

ನಾವು ಚುನಾವಣೆಯಲ್ಲಿ ಬಹುದೊಡ್ಡ ಪಕ್ಷವಾಗಿ ಹೊರ ಹೊಮ್ಮಿರುವುದರಿಂದ ರಾಜ್ಯಪಾಲರು ನಮಗೆ ಮೊದಲ ಅವಕಾಶ ನೀಡಿದ್ದಾರೆ. ನಾಳೆ ರಾಜಭವನದ ಹಾಲ್ ನಲ್ಲಿ ಪ್ರಮಾಣ ವಚನ ಸ್ವೀಕಾರವಾಗಲಿದೆ. ಆದರೆ ಈ ಸಮಾರಂಭಕ್ಕೆ ರಾಷ್ಟ್ರೀಯ ನಾಯಕರು ಬರುತ್ತಿಲ್ಲ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ