ಕಾಂಗ್ರೆಸ್ ಶಾಸಕ ಬಿಸಿ ಪಾಟೀಲ್ ಬೆನ್ನು ಬಿದ್ದ ಬಿಎಸ್ ಯಡಿಯೂರಪ್ಪ ಅಭಿಮಾನಿಗಳು!

ಸೋಮವಾರ, 24 ಸೆಪ್ಟಂಬರ್ 2018 (09:09 IST)
ಬೆಂಗಳೂರು: ಕಾಂಗ್ರೆಸ್ ನ ಕೆಲವು ಶಾಸಕರನ್ನು ಬಿಜೆಪಿ ಆಪರೇಷನ್ ಕಮಲದ ಮೂಲಕ ತನ್ನತ್ತ ಸೆಳೆಯಲು ಯತ್ನಿಸುತ್ತಿದೆ ಎಂಬ ಆರೋಪಗಳ ಬೆನ್ನಲ್ಲೇ ಬಿಎಸ್ ವೈ ಬೆಂಬಲಿಗರು ಕಾಂಗ್ರೆಸ್ ಶಾಸಕ ಬಿಸಿ ಪಾಟೀಲ್ ರನ್ನು ಸೆಳೆಯಲು ಯತ್ನಿಸಿದ ಘಟನೆ ನಡೆದಿದೆ.
 

ಹಿರೇಕೆರೂರು ಶಾಸಕ ಬಿಸಿ ಪಾಟೀಲ್ ರನ್ನು ಬಿಜೆಪಿಗೆ ಸೆಳೆಯಲು ಬಿಎಸ್ ಯಡಿಯೂರಪ್ಪ ಬೆಂಬಲಿಗರು ಬಹಿರಂಗವಾಗಿಯೇ ಒತ್ತಾಯಿಸಿದ ಘಟನೆ ಸಿರಿಗೆರೆಯಲ್ಲಿ ನಡೆದ ತರಳಬಾಳು ಶಿವಕುಮಾರ ಶಿವಾಚಾರ್ಯ ಸ್ವಾಮೀಜಿಗಳ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ನಡೆದಿದೆ.

ಹಿಂದೆಯೂ ಬಿಸಿ ಪಾಟೀಲ್ ರನ್ನು ಸೆಳೆಯಲು ಬಿಜೆಪಿ ಭಾರೀ ಪ್ರಯತ್ನ ನಡೆಸಿತ್ತು. ಆದರೆ ಮೊನ್ನೆ ಕೂಡಾ ಬಿಸಿ ಪಾಟೀಲರು ನಾನು ಯಾವುದೇ ಕಾರಣಕ್ಕೂ ಬಿಜೆಪಿ ಸೇರುವ ಪ್ರಶ್ನೆಯೇ ಇಲ್ಲ ಎಂದಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ