ಬಜೆಟ್: ಮೇಕೆದಾಟು ಯೋಜನೆಗೆ ಅನುದಾನ ಘೋಷಣೆ
ಮೇಕೆದಾಟು ಯೋಜನೆಗೆ 1,000 ಕೋಟಿ ರೂ., ಎತ್ತಿನಹೊಳೆ ಯೋಜನೆಗೆ 3 ಸಾವಿರ ಕೋಟಿ ರೂ., ಕೃಷ್ಣ ಮೇಲ್ದಂಡೆ 3ನೇ ಹಂತಕ್ಕೆ 5 ಸಾವಿರ ಕೋಟಿ ರೂ. ಹಾಗೂ ಕಳಸಾ ಬಂಡೂರಿ ಯೋಜನೆಗೆ ಸಾವಿರ ಕೋಟಿ ರೂ. ನಿಯೋಜನೆ ಮಾಡುವುದಾಗಿ ಸಿಎಂ ಬೊಮ್ಮಾಯಿ ಘೋಷಿಸಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ ವಿಧಾನಸಭೆಯಲ್ಲಿ 2,65,719.92 ಕೋಟಿ ರೂ. ಗಾತ್ರದ ಬಜೆಟ್ ಮಂಡಿಸಿದ್ದಾರೆ. ಬಜೆಟ್ ಗಾತ್ರ ಕಳೆದ ಬಾರಿಗಿಂತ ಶೇಕಡಾ 7.7ರಷ್ಟು ಹೆಚ್ಚಳವಾಗಿದೆ. ಜಲ ಜೀವನ್ ಮಿಷನ್ ಅಡಿ 25 ಲಕ್ಷ ಮನೆಗೆ ನಲ್ಲಿ ನೀರು ನೀಡಲಾಗುತ್ತದೆ