ಬಜೆಟ್ನಲ್ಲಿ ಕೃಷಿ, ಆರೋಗ್ಯ, ಶಿಕ್ಷಣಕ್ಕೆ ಭರಪೂರ

ಶುಕ್ರವಾರ, 4 ಮಾರ್ಚ್ 2022 (14:32 IST)
ಇಂದು ಸಿಎಂ ಬಸವರಾಜ ಬೊಮ್ಮಾಯಿ  ಅವರು ಚೊಚ್ಚಲ ಬಜೆಟ್ ಮಂಡಿಸುತ್ತಿದ್ದಾರೆ.
 
ಕೊರೊನಾ ನಡುವೆ ಬಿಜೆಪಿ ಸರ್ಕಾರ ಬಜೆಟ್ ಮಂಡಿಸಲು ತಯಾರಿ ನಡೆಸಿದ್ದು, ಯಾವೆಲ್ಲಾ ಕ್ಷೇತ್ರಕ್ಕೆ ಮೊದಲ ಬಜೆಟ್ ಬಜೆಟ್ನಲ್ಲಿ ಸಿಎಂ ಬೊಮ್ಮಾಯಿ ಕೊಡುಗೆ ನೀಡಲಿದ್ದಾರೆ ಎನ್ನುವ ಕುತೂಹಲ ಗರಿಗೆದರಿದೆ.

ಮುಂಬರುವ ಚುನಾವಣೆ, ಕೋವಿಡ್ನಿಂದ ಹದಗೆಟ್ಟ ಆರ್ಥಿಕ ಪರಿಸ್ಥಿತಿ ಯನ್ನು ಗಮನದಲ್ಲಿರಿಸಿ ಈ ಬಾರಿಯ ಬಜೆಟ್ ಮಂಡನೆಯಾಗುತ್ತಿದೆ.

ಬಜೆಟ್ ಮಂಡನೆಗೂ ಮುನ್ನ ದೇವಾಲಯಕ್ಕೆ ಸಿಎಂ ಭೇಟಿ ನೀಡಿದ್ದಾರೆ.  ಆಂಜನೇಯ ಸ್ವಾಮಿ ದೇವಾಲಯದಲ್ಲಿ ಸಿಎಂ ಪೂಜೆ ಸಲ್ಲಿಸಿ, ಸಮಸ್ತ ಕರ್ನಾಟಕ ಕ್ಷೇಮೋದಯ ಹೆಸರಲ್ಲಿ ಸಿಎಂ ಅರ್ಚನೆ ಮಾಡಿಸಿದ್ದಾರೆ. ವಿಧಾನಸೌಧದಲ್ಲಿ ಸಿಎಂ ಬೊಮ್ಮಾಯಿ 2022-23 ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಆರಂಭಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ