ಸರ್ಕಾರಿ ನೌಕರರಿಗೆ ಬಂಪರ್ ಕೊಡುಗೆ!

ಬುಧವಾರ, 26 ಜನವರಿ 2022 (16:28 IST)
ರಾಯ್ಪರ : ಛತ್ತೀಸ್ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ಗಣರಾಜ್ಯೋತ್ಸವ ಅಂಗವಾಗಿ ಸರ್ಕಾರಿ ನೌಕರರಿಗೆ ಬಂಪರ್ ಕೊಡುಗೆಯನ್ನು ಕೊಟ್ಟಿದ್ದಾರೆ.

ಸರ್ಕಾರಿ ಕಚೇರಿಗಳು ವಾರದಲ್ಲಿ 5 ದಿನ ಮಾತ್ರ ಕಾರ್ಯನಿರ್ವಹಿಸಲಿವೆ ಎಂದು ಹೇಳಿದ್ದಾರೆ. ಸರ್ಕಾರಿ ನೌಕರರ ದಕ್ಷತೆ ಮತ್ತು ಉತ್ಪಾದಕತೆಯನ್ನು ಹೆಚ್ಚಿಸುವ ಪ್ರಯತ್ನದ ಭಾಗವಾಗಿ, ಛತ್ತೀಸ್ಗಢ ಸರ್ಕಾರವು ವಾರದಲ್ಲಿ ಐದು ದಿನ ಕೆಲಸ ನಿಯಮವನ್ನು ಜಾರಿಗೊಳಿಸುತ್ತಿದೆ.

ಪಿಂಚಣಿ ಯೋಜನೆಯಲ್ಲಿ ರಾಜ್ಯ ಸರ್ಕಾರದ ಕೊಡುಗೆಯನ್ನು ಸಹ ಶೇಕಡಾ 10 ರಿಂದ ಶೇಕಡಾ 14 ಕ್ಕೆ ಹೆಚ್ಚಿಸಲಾಗುವುದು ಎಂದು ಬಘೇಲ್ ಟ್ವೀಟ್ ಮೂಲಕ ತಿಳಿಸಿದ್ದಾರೆ. 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ