ಯುದ್ಧ ನಿಲ್ಲಿಸಿ ಎಂದು ಪುಟಿನ್‌ಗೆ ನಾವು ಹೇಳಬಹುದೇ : ಸಿಜೆಐ

ಗುರುವಾರ, 3 ಮಾರ್ಚ್ 2022 (12:52 IST)
ನವದೆಹಲಿ : ಉಕ್ರೇನ್ ಗಡಿಯಲ್ಲಿ ಸಿಲುಕಿರುವ ವಿದ್ಯಾರ್ಥಿಗಳ ಸುರಕ್ಷಿತ ಸ್ಥಳಾಂತರ ಕುರಿತ ಮನವಿಯ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ವಿಚಾರಣೆ ನಡೆಸುತ್ತಿದ್ದಾರೆ.

ಉಕ್ರೇನ್ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳನ್ನು ಸ್ಥಳಾಂತರಿಸುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಏನು ಮಾಡುತ್ತಿದ್ದಾರೆ ಎಂಬ ಪ್ರಶ್ನೆಯೊಂದು ಸಾಮಾಜಿಕ ಮಾಧ್ಯಮದಲ್ಲಿ ಕೇಳಿಬಂದಿದೆ.

ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ವಿರುದ್ಧ ವ್ಯಕ್ತವಾಗಿರುವ ಪ್ರಶ್ನೆ ಕುರಿತು ಅಚ್ಚರಿ ವ್ಯಕ್ತಪಡಿಸಿರುವ ಸಿಜೆಐ, ಯುದ್ಧವನ್ನು ನಿಲ್ಲಿಸುವಂತೆ ನಾನು ರಷ್ಯಾ ಅಧ್ಯಕ್ಷ ಪುಟಿನ್ ಅವರಿಗೆ ಹೇಳಬಹುದೇ ಎಂದು ಪ್ರಶ್ನಿಸಿದ್ದಾರೆ.

ಉಕ್ರೇನ್ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳ ಮೇಲೆ ನಮಗೆ ಸಹಾನುಭೂತಿ ಇದೆ. ಅವರನ್ನು ಸ್ಥಳಾಂತರಿಸುವ ನಿಟ್ಟಿನಲ್ಲಿ ಭಾರತ ಸರ್ಕಾರ ತನ್ನ ಕೆಲಸವನ್ನು ಮಾಡುತ್ತಿದೆ. ನಾವು ಏನು ಮಾಡಬಹುದು ಎಂದು ಅಟಾರ್ನಿ ಜನರಲ್ ಅವರನ್ನು ಕೇಳಿದ್ದೇವೆ ಎಂದು ಸಿಜೆಐ ತಿಳಿಸಿದ್ದಾರೆ. 

ಉಕ್ರೇನ್ನ ಪಶ್ಚಿಮ ಭಾಗದ ನೆರೆರಾಷ್ಟ್ರಗಳಾದ ರೊಮೇನಿಯಾ, ಹಂಗೇರಿ, ಪೋಲ್ಯಾಂಡ್ ಮೂಲಕ ಭಾರತ ತನ್ನ ಪ್ರಜೆಗಳನ್ನು ವಿಶೇಷ ವಿಮಾನಗಳ ಮೂಲಕ ಸ್ಥಳಾಂತರಿಸುವ ಕಾರ್ಯಾಚರಣೆ ನಡೆಸುತ್ತಿದೆ. ಫೆ.24ರಿಂದ ಉಕ್ರೇನ್ ವಾಯುಮಾರ್ಗ ಸ್ಥಗಿತಗೊಂಡಿರುವ ಕಾರಣ ಈ ಕ್ರಮವಹಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ