ದ್ವಿಚಕ್ರ ವಾಹನ ಹಿಂಬದಿ ಸವಾರ ನಿಯಮ ರದ್ದು!

ಶುಕ್ರವಾರ, 5 ಆಗಸ್ಟ್ 2022 (13:48 IST)
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ ದ್ವಿಚಕ್ರ ವಾಹನದಲ್ಲಿ ಹಿಂಬದಿ ಪುರುಷ ಸವಾರರಿಗೆ ಅವಕಾಶ ಇಲ್ಲ ಎಂದು ಜಾರಿಗೆ ಮುಂದಾಗಿದ್ದ ಆದೇಶವನ್ನು ಜಿಲ್ಲಾಡಳಿತ ಹಿಂತೆಗೆದುಕೊಂಡಿದೆ.

ನಗರದಲ್ಲಿ ಇಂದು ಬೆಳಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಎಡಿಜಿಪಿ ಅಲೋಕ್ ಕುಮಾರ್ ನಾಳೆಯಿಂದ ದ್ವಿಚಕ್ರ ವಾಹನದಲ್ಲಿ ಹಿಂಬದಿ ಪುರುಷ ಸವಾರರಿಗೆ ಅವಕಾಶ ಇಲ್ಲ.

ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಗೆ ಮಾತ್ರ ಈ ನಿಯಮ ಅನ್ವಯವಾಗಲಿದೆ ಎಂದು ತಿಳಿಸಿದ್ದರು. ಆ ಬಳಿಕ ಸಾರ್ವಜನಿಕ ವಲಯದಲ್ಲಿ ಈ ನಿಯಮದ ವಿರುದ್ಧ ತೀವ್ರ ಆಕ್ರೋಶ ಕೇಳಿ ಬಂದಿತ್ತು. ಆ ಬಳಿಕ ಇದೀಗ ಜಿಲ್ಲಾಡಳಿತ ಆದೇಶ ರದ್ದು ಮಾಡಿದೆ.

ನಾಳೆಯಿಂದ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರಿಗೆ ಅವಕಾಶ ಇಲ್ಲ. ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಗೆ ಮಾತ್ರ ಈ ನಿಯಮ ಅನ್ವಯವಾಗಲಿದೆ.

18 ವರ್ಷದ ಕೆಳಗಿನ ಮಕ್ಕಳು, ಹಿರಿಯ ನಾಗರಿಕರು, ಮಹಿಳೆಯರು ಓಡಾಡಬಹುದು. ಇಬ್ಬರು ಪುರುಷ ಸವಾರರಿಗೆ ಈ ರೂಲ್ಸ್ ಇದ್ದು, ಕೆಲವು ಬಾರಿ ಹಿಂಬದಿ ಸವಾರರು ದುಷ್ಕೃತ್ಯ ಮಾಡುತ್ತಾರೆ. ಈ ಹಿನ್ನೆಲೆಯಲ್ಲಿ ಈ ನಿಯಮ ಜಾರಿಯಾಗಲಿದೆ ಎಂದು ಇಂದು ಬೆಳಗ್ಗೆ ಎಡಿಜಿಪಿ ಅಲೋಕ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ