ಕಾವೇರಿ ನದಿ ವಿವಾದ: ಸರ್ವಪಕ್ಷ ಸಭೆಯಲ್ಲಿ ಆದ ತೀರ್ಮಾನಗಳೇನು?
ಪಕ್ಷಬೇಧ ಮರೆತು ಕಾವೇರಿಗಾಗಿ ಹೋರಾಡಬೇಕು ಎಂದು ಸಿಎಂ ಈ ಸಂದರ್ಭದಲ್ಲಿ ಸಂಸದರಿಗೆ ಮನವಿ ಮಾಡಿದ್ದಾರೆ. ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ನಮ್ಮ ಹಕ್ಕುಗಳನ್ನು ನ್ಯಾಯಯುತವಾಗಿ ಪಡೆದುಕೊಳ್ಳೋಣ ಎಂದು ತೀರ್ಮಾನಕ್ಕೆ ಬರಲಾಯಿತು.
ಪ್ರಾಧಿಕಾರ ರಚನೆ ಸಂಬಂಧ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ಈ ಸಂದರ್ಭದಲ್ಲಿ ತೀರ್ಮಾನಿಸಿರುವುದಾಗಿ ತಿಳಿದುಬಂದಿದೆ. ಇನ್ನು, ಕೇಂದ್ರ ಸರ್ಕಾರದ ಅನುದಾನ ಮಂಜೂರು ಮಾಡಿಸುವುದು, ರಾಜ್ಯದ ಯೋಜನೆಗಳ ಬಗ್ಗೆ ಸಂಸದರಿಗೆ ಮನವರಿಕೆ ಮಾಡಿಕೊಡಲಾಯಿತು.