ಕರ್ನಾಟಕ ಸರ್ಕಾರಕ್ಕೆ ಮತ್ತೆ ಕಾವೇರಿ ಶಾಕ್ !

ಮಂಗಳವಾರ, 19 ಸೆಪ್ಟಂಬರ್ 2023 (11:04 IST)
ನವದೆಹಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರವಾಗಿ ಕರ್ನಾಟಕಕ್ಕೆ ಮತ್ತೆ ಶಾಕ್ ನೀಡಲಾಗಿದೆ. ಪ್ರತಿದಿನ 5,000 ಕ್ಯೂಸೆಕ್ ನೀರು ಬಿಡುಗಡೆ ಮಾಡಲು ಕರ್ನಾಟಕಕ್ಕೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶಿಸಲಾಗಿದೆ.

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದಿಂದ ಇಂದು (ಸೋಮವಾರ) ಸಭೆ ನಡೆಸಲಾಯಿತು. ಸಭೆಯಲ್ಲಿ, ಎರಡು ರಾಜ್ಯಗಳನ್ನು ನಿಭಾಯಿಸಲು ಸಿಡಬ್ಲ್ಯೂಆರ್ಸಿ ಆದೇಶ ಪಾಲಿಸಬೇಕು. 15 ದಿನ 5,000 ಕ್ಯೂಸೆಕ್ ನೀರು ಬಿಡಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶಿಸಿದೆ. 

ಸಭೆ ಆರಂಭದ ವೇಳೆ, ನೀರಿಗಾಗಿ ತಮಿಳುನಾಡು ಪಟ್ಟು ತೀವ್ರಗೊಳಿಸಿತ್ತು. ನಿತ್ಯ 12,500 ಕ್ಯೂಸೆಕ್ ನೀರು ಹರಿಸಲು ಪಟ್ಟು ಹಿಡಿದಿತ್ತು. ಆದರೆ ನೀರು ನಿರ್ವಹಣಾ ಪ್ರಾಧಿಕಾರ, ಸಿಡಬ್ಲ್ಯೂಆರ್ಸಿ ಆದೇಶವನ್ನು ಮುಂದುವರಿಸುವಂತೆ ಸೂಚಿಸಿದೆ.

ಪ್ರಾಧಿಕಾರದ ಆದೇಶ ತಮಿಳುನಾಡಿನ ಪರ ಬಂದಿದೆ. ಈ ಆದೇಶದಿಂದ ಕರ್ನಾಟಕ ಸರ್ಕಾರಕ್ಕೆ ಹಿನ್ನಡೆಯಾಗಿದ್ದು, ಮತ್ತೆ ಕಾವೇರಿ ಸಂಕಷ್ಟ ಎದುರಾಗಿದೆ.  ನೀರು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಎಸ್.ಕೆ.ಹಲ್ದಾರ್ ನೇತೃತ್ವದಲ್ಲಿ ತುರ್ತು ಸಭೆ ನಡೆಯಿತು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ