ಬೆಂಗಳೂರು : ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ವಿರುದ್ಧ ಸಿಬಿಐ ತನಿಖೆ ಕೋರಿ ವಕೀಲ ಕೆ.ಎನ್.ಜಗದೀಶ್ ಕುಮಾರ್ ರಿಟ್ ಅರ್ಜಿಯನ್ನು ಹೈಕೋರ್ಟ್ ಗೆ ಸಲ್ಲಿಕೆ ಮಾಡಿದ್ದಾರೆ.
ಆದಾಯ ಮೀರಿ ಆಸ್ತಿ ಗಳಿಸಿದ ಆರೋಪ ಎದುರಿಸುತ್ತಿರುವ ರವಿ ಡಿ ಚೆನ್ನಣ್ಣ ಅವರ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿರುವ ವಕೀಲ ಜಗದೀಶ್ ಈ ಅರ್ಜಿ ಸಲ್ಲಿಕೆ ಮಾಡಿದ್ದು, ಸಂಬಂಧಿಕರ ಹೆಸರಿನಲ್ಲಿ ಅಕ್ರಮ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಅಷ್ಟೇ ಅಲ್ಲದೇ ಬೇನಾಮಿ ಹೆಸರಲ್ಲಿ ಅಕ್ರಮ ಆಸ್ತಿ ಗಳಿಕೆ ಮಾಡಿದ್ದಾರೆ. ಜೊತೆಗೆ ಪೋಷಕರ ಹೆಸರಿನಲ್ಲೂ ಅಪಾರ ಆಸ್ತಿ ಖರೀದಿಸಲಾಗಿದೆ ಎಂದು ತಮ್ಮ ಅರ್ಜಿಯಲ್ಲಿ ದೂರಿದ್ದಾರೆ.
ಈ ಬಗ್ಗೆ ಈಗಾಗಲೇ ಸರ್ಕಾರಕ್ಕೆ ಅರ್ಜಿಯನ್ನು ಬರೆದಿದ್ದು, ರವಿ ಚನ್ನಣ್ಣವರ್ ವಿರುದ್ಧ ಸರ್ಕಾರ ತನಿಖೆ ನಡೆಸಲು ಹಿಂದೇಟು ಹಾಕಿದೆ. ಹೀಗಾಗಿ ಸಿಬಿಐ, ಇಡಿ ಯಿಂದ ನಡೆಸುವಂತೆ ಮನವಿ ಮಾಡಿದ್ದಾರೆ. ವಕೀಲರ ಮೂಲಕ ಕೆ.ಎನ್.ಜಗದೀಶ್ ರಿಟ್ ಅರ್ಜಿಯನ್ನು ಸಲ್ಲಿಕೆ ಮಾಡಿದ್ದಾರೆ.