ಗಗನಕ್ಕೇರಿದ ಟೊಮೆಟೋ ಬೆಲೆ!

ಬುಧವಾರ, 8 ಡಿಸೆಂಬರ್ 2021 (11:21 IST)
ಬೆಂಗಳೂರು : ರಾಜ್ಯದಲ್ಲಿ ಅಕಾಲಿಕ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥವಾಗಿದೆ. ಒಂದು ಕಡೆ ಸಂಚಾರಕ್ಕೆ ತೊಂದರೆಯಾದರೆ ಇನ್ನೊಂದು ಕಡೆ ಕಟಾವಿಗೆ ಸಿದ್ಧವಾದ ಬೆಳೆಗಳು ನೀರು ಪಾಲಾಗಿದೆ.

ಅದರಲ್ಲೂ ಬೆಳೆಯನ್ನೇ ನಂಬಿಕೊಂಡು ಜೀವನ ನಡೆಸುವ ರೈತರ ಸ್ಥಿತಿ ಹೇಳತೀರದು. ಗದ್ದೆಗಳಲ್ಲಿ, ತೋಟಗಳಲ್ಲಿ ನೀರು ತುಂಬಿಕೊಂಡಿದ್ದು, ರೈತರು ಆತಂಕದಲ್ಲೇ ಜೀವನ ಸಾಗಿಸುವಂತಾಗಿದೆ. ಹೀಗಿರುವಾಗಲೇ ತರಕಾರಿಗಳ ಬೆಲೆ ಏರಿಕೆಯಾಗಿದೆ. ಇದಕ್ಕೆ ಕಾರಣ ಫಸಲು ಸರಿಯಾಗಿ ಮಾರುಕಟ್ಟೆ ಸೇರದಿರುವುದು.
ಅದರಲ್ಲೂ ಈ ಹಿಂದೆ ರಸ್ತೆಗೆ ಟೊಮೆಟೋಗಳನ್ನು ಸುರಿದು ಪ್ರತಿಭಟನೆ ನಡೆಸುತ್ತಿದ್ದ ರೈತರು ಈಗ ದಾಖಲೆಯ ಮೊತ್ತಕ್ಕೆ ಟೊಮೆಟೋ ಮಾರಾಟ ಮಾಡುತ್ತಿದ್ದಾರೆ. ಇದಕ್ಕೆ ಮುಖ್ಯ ಕಾರಣ ಮಾರುಕಟ್ಟೆಗೆ ಟೊಮೆಟೋ ಪೂರೈಕೆಯಾಗುತ್ತಿಲ್ಲ.
ಬೆಂಗಳೂರಿನಲ್ಲಿ ಟೊಮೆಟೋ ಬೆಲೆ ಸದ್ಯ ಗಗನಕ್ಕೇರಿದೆ. ಅಕಾಲಿಕ ಮಳೆಯು ಟೊಮೆಟೋ ದರಗಳ ಮೇಲೆ ಪರಿಣಾಮ ಬೀರಿದೆ. ಹೀಗಾಗಿ ಈಗ ಟೊಮೆಟೋ ಕೆಜಿಗೆ 70 ರೂಪಾಯಿಯಾಗಿದೆ .
ಇನ್ನೂ ಚೆನ್ನೈನಲ್ಲಿ ಟೊಮೆಟೋ ಬೆಲೆ ಕೆಜಿಗೆ 80 ರಿಂದ 90 ರೂಪಾಯಿ ನಿಗದಿಯಾಗಿದೆ. ಮಳೆಯಿಂದಾಗಿ ಟೊಮ್ಯಾಟೋ ಮಾತ್ರವಲ್ಲದೆ ಇತರ ತರಕಾರಿಗಳ ಬೆಲೆಯೂ ಕೆಜಿಗೆ 80 ರಿಂದ 90 ರೂಪಾಯಿವರೆಗೆ ನಿಗದಿಯಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ